Featured

ಎಸ್.ಎಂ.ಕೃಷ್ಣರಿಗೆ ಮರಣೋತ್ತರ ʼಕರ್ನಾಟಕ ರತ್ನʼ ನೀಡಲು ಆರ್.ಅಶೋಕ್ ಆಗ್ರಹ – vishwanews24

ಎಸ್.ಎಂ.ಕೃಷ್ಣರಿಗೆ ಮರಣೋತ್ತರ ʼಕರ್ನಾಟಕ ರತ್ನʼ ನೀಡಲು ಆರ್.ಅಶೋಕ್ ಆಗ್ರಹ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಬುಧವಾರ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಎಂದು ಉಲ್ಲೇಖಿಸಿದ್ದಾರೆ.

 

ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ ಎಂದು ಸ್ಮರಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

35 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago