Featured

ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ : ಕಾಂಗ್ರೆಸ್‌ – Vishwanews24

ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಅಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? : ಕಾಂಗ್ರೆಸ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ , ಕಾಂಗ್ರೆಸ್‌ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಹಿರಿಯ ನಾಯಕ ಕೃಷ್ಣ ಅವರ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸ್ಸು ಬಿಜೆಪಿಗರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ. ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಅಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? ಎಂದು ಕಾಂಗ್ರೆಸ್‌ ಮಾರ್ಮಿಕವಾಗಿ ಟ್ವೀಟ್ ಮಾಡಿದೆ.

“ನನಗೆ 90 ವರ್ಷವಾಯ್ತು, ವಯಸ್ಸಿನ ಅರಿವು ನಮಗಿರಬೇಕು, 90ರ ಈ ವಯಸ್ಸಿನಲ್ಲಿ 50 ವರ್ಷ ವಯಸ್ಸಾದವರಂತೆ ನಟನೆ ಮಾಡಲು ಆಗುವುದಿಲ್ಲ. ಹೀಗಾಗಿ, ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್‌.ಎಂ.ಕೃಷ್ಣ ರಾಜಕೀಯದಿಂದ ನಿವೃತ್ತಯಾಗುತ್ತಿರುವುದಾಗಿ ಹೊಸ ವರ್ಷದ ಸಂದೇಶ ನೀಡುವ ಸಂದರ್ಭದಲ್ಲಿ ತಿಳಿಸಿದ್ದರು.

‘ನಿವೃತ್ತಿ ಆಗುತ್ತಿದ್ದೇನೆ ಎಂದರೆ ಸನ್ಯಾಸ ಪಡೆಯುತ್ತಿದ್ದೇನೆ ಎಂದಲ್ಲ. ಪಕ್ಷ ಅಥವಾ ನಾಯಕರು ಸಂಘಟನೆ ಮತ್ತು ಇತರ ವಿಚಾರಗಳಲ್ಲಿ ಸಲಹೆಗಳನ್ನು ಕೇಳಿದರೆ ನೀಡಲು ಸಿದ್ಧನಿದ್ದೇನೆ. ಆದರೆ ನಾನಾಗಿಯೇ ಮೇಲೆ ಬಿದ್ದು ಸಲಹೆ ನೀಡಲು ಹೋಗುವುದಿಲ್ಲ. ಹಳೇ ಮೈಸೂರು ಭಾಗದಲ್ಲಿ ಸಂಘಟನೆಯ ವಿಚಾರದಲ್ಲಿ ಸಲಹೆ ನೀಡಿದರೆ ಕೊಡುತ್ತೇನೆ’ ಎಂದಿದ್ದಾರೆ.

‘ನಾನಾಗಿಯೇ ರಾಜಕೀಯದಿಂದ ಹಿಂದಕ್ಕೆ ಸರಿಯುತ್ತಿರುವುದರಿಂದ ನನ್ನನ್ನು ಪಕ್ಷ ನಿರ್ಲಕ್ಷಿಸುತ್ತಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

1 hour ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

1 hour ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

1 hour ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

2 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago