ಎಸ್.ಎಂ.ಕೃಷ್ಣ ನಿಧನ : ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ – vishwanews24

Featured, ರಾಜ್ಯ ನ್ಯೂಸ್

ಎಸ್.ಎಂ.ಕೃಷ್ಣ ನಿಧನ : ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಸರಕಾರವು ರಾಜ್ಯದಲ್ಲಿ ಡಿ.10ರಿಂದ 12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಸರಕಾರ, ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ.

ಮಾಜಿ ಸಿಎಂ ಎಸ್.‌ ಎಂ ಕೃಷ್ಣ ವಿಧಿವಶ – vishwanews24

ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಯು ಡಿ.11ರಂದು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

 

Leave a Reply