Featured

ಎಸ್.ಎಸ್.ಎಲ್.ಸಿ ಪರೀಕ್ಷೆ : ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ -Vishwanews24

ಉಡುಪಿ,  : ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ರಿಂದ ರಾತ್ರಿ 6 ರ ವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.

ಈ ಆದೇಶದಂತೆ ಪರೀಕ್ಷಾ ಕೇಂದ್ರಗಳ ಸುತ್ತ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವುದು, ಯಾವುದೇ ಸಾರ್ವಜನಿಕರು 5 ಜನ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಷೇಧಿತ ಪ್ರದೇಶವೆಂದು ಜಾರಿಗೊಳಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವುದು, ಪರೀಕ್ಷಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹೊರಗಿನ ವ್ಯಕ್ತಿಗಳು ಯಾವುದೇ ರೀತಿಯ ಬೆದರಿಕೆ ಒಡ್ಡುವುದನ್ನು, ನಿಷೇಧಿತ ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಬಳಕೆಯನ್ನು, ಪರೀಕ್ಷಾ ಗೌಪ್ಯ ಸಾಮಾಗ್ರಿಗಳನ್ನು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದಿಂದ ಹೊರಗಡೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದ್ದು, ಈ ನಿಷೇಧಾಜ್ಞೆ ಆದೇಶವು ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago