Featured

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಕೈ ಗಡಿಯಾರ ನಿಷೇಧ..!!

ಬೆಂಗಳೂರು,: ಪರೀಕ್ಷಾ ಕೇಂದ್ರಗಳಲ್ಲಿನ ನಕಲು ತಡೆಯುವ ಉದ್ದೇಶದಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವೇಳೆ ಕೈ ಗಡಿಯಾರ ಕಟ್ಟಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವುದಕ್ಕೆ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿಷೇಧ ಹೇರಲಾಗಿದೆ..

ಮುಂದಿನ ವರ್ಷ ನಡೆಯಲಿರುವ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಿಂದ ಈ ನಿಯಮ ಅನ್ವಯವಾಗಲಿದ್ದು, ಪರ್ಯಾಯ ಮಾರ್ಗವಾಗಿ ಪರೀಕ್ಷಾ ಕೇಂದ್ರಗಳಲ್ಲೆ ಗೋಡೆ ಗಡಿಯಾರ ಹಾಕಲು ನಿರ್ಧರಿಸಿದೆ..

ಇತ್ತೀಚಿನ ದಿನಗಳಲ್ಲಿ ಆಧುನಿಕ ಶೈಲಿಯ ಕೈಗಡಿಯಾರಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಿವೆ. ಅವುಗಳಲ್ಲಿ ಕೆಲವೊಂದರಲ್ಲಿ ರೆಕಾರ್ಡಿಂಗ್ ವ್ಯವಸ್ಥೆಯನ್ನು ಹೊಂದಿರುವ ವಾಚ್ ಗಳಿರುತ್ತವೆ. ಎಲೆಕ್ಟ್ರಾನಿಕ್ ಗಡಿಯಾರಗಳ ಮೂಲಕ ನಕಲು ಮಾಡುವುದು ಸುಲಭವಾಗಿದೆ. ಈ ವಾಚ್‌ಗಳು ಬ್ಲೂಟೂತ್‌ಗಳ ಮೂಲಕ ಸ್ಮಾರ್ಟ್ ಫೋನ್‌ಗಳಿಗೆ ಸಂಪರ್ಕ ಕಲ್ಪಿಸಿ ಸುಲಭ ರೀತಿಯಲ್ಲಿ ನಕಲು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಮಂಡಳಿ ರಿಸ್ಟ್ ವಾಚ್ ಗಳಿಗೆ ನಿಷೇಧ ಹೇರಿದೆ.

ಬದಲಿಗೆ ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳಿಗೆ ನೆರವಾಗಲು ಪ್ರತಿಯೊಂದು ಕೊಠಡಿಗಳಲ್ಲೂ ಗಡಿಯಾರಗಳನ್ನು ಅಳವಡಿಸಲು ತೀರ್ಮಾನಿಸಿದೆ. ಹಾಗೂ ಪರೀಕ್ಷಾ ವೇಳಾಪಟ್ಟಿ ಅಂತಿಮವಾದ ಬಳಿಕ ಎಲ್ಲಾ ಕೇಂದ್ರಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಲು ಮಂಡಳಿ ತೀರ್ಮಾನಿಸಿದೆ.

Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

44 seconds ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

7 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

12 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

19 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

29 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago