ಮಂಗಳೂರು, : ಬ್ಯಾಂಕ್ ಕ್ಷೇತ್ರದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಮಾಡದ ಸೇವೆಗಳನ್ನು ಸಹಕಾರಿ ಬ್ಯಾಂಕುಗಳು ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸ್ಥಳಾಂತರ ಗೊಂಡ ಶಾಖೆಯನ್ನು ಕಂಕನಾಡಿ ಬೈಪಾಸ್ ರಸ್ತೆ ಬಳಿ ಇರುವ ಕಣಚೂರು ಕಾಂಪ್ಲೆಕ್ಸ್ ಕಟ್ಟಡದಲ್ಲಿಂದು ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು.
ಎಸ್ ಸಿಡಿಸಿಸಿ ಬ್ಯಾಂಕ್ ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ರೀತಿಯ ಸೇವೆಯನ್ನು ಮಾಡಿ ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. ಸಮರ್ಥ ನಾಯಕತ್ವ, ಉತ್ತಮ ಗ್ರಾಹಕ ಸೇವೆಯಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನೆ ಮಾಡಿದೆ ಎಂದು ವೇದವ್ಯಾಸ ಕಾಮತ್ ಶ್ಲಾಘಿಸಿದರು.
ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ , ಬ್ಯಾಂಕ್ ನ ಠೇವಣಿ ಕಳೆದ 25 ವರ್ಷ ಗಳಲ್ಲಿ 25 ಕೋಟಿಯಿಂದ 3,500 ಕೋಟಿ ರೂಗೆ ಏರಿಕೆಯಾಗಿದೆ. ಜನರ ಬಳಿಗೆ ಹೋಗಿ ಸೇವೆ ಸಲ್ಲಿಸಬೇಕು ಎನ್ನುವ ನೆಲೆಯಲ್ಲಿ ಶಾಖೆಯ ವಿಸ್ತರಣೆ, ಸ್ಥಳಾಂತರ, ಶಾಖೆಯನ್ನು ಜನರ ಬಳಿ ತೆಗೆದುಕೊಂಡು ಹೋಗುತ್ತಿದ್ದೇವೆ. ಸಮಾಜದ ಅತ್ಯಂತ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಗ್ರಾಹಕ ಸೇವೆ ದೊರೆಯಬೇಕು ಎನ್ನುವುದು ನಮ್ಮ ಗುರಿ ಇದೆ. ಸಹಕಾರಿ ಕ್ಷೇತ್ರದ ಮೇಲೆ ಜನರ ವಿಶ್ವಾಸ ಹೆಚ್ಚುತ್ತಿದೆ. ಸಹಕಾರಿ ಕ್ಷೇತ್ರವನ್ನು ಬಲಿಷ್ಠಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ್ ಭಟ್, ಭಾಸ್ಕರ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ್, ಜಯರಾಮ ರೈ, ವಾದಿರಾಜ ಶೆಟ್ಟಿ, ಶಶಿ ಕುಮಾರ್ ರೈ, ಮಹೇಶ್ ಹೆಗ್ಡೆ, ಜಯರಾಜ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಜಿ, ಶಾಖಾ ವ್ಯವಸ್ಥಾಪಕರಾದ ಮಮತಾ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…