Featured

ಎಸ್ ಸಿಡಿಸಿಸಿ ಬ್ಯಾಂಕ್ ರಾಷ್ಟ್ರ ಮಟ್ಟದಲ್ಲಿ ಸೇವೆಯನ್ನು ಮಾಡಿ ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ : ವೇದವ್ಯಾಸ ಕಾಮತ್ -Vishwanews24

ಮಂಗಳೂರು, : ಬ್ಯಾಂಕ್ ಕ್ಷೇತ್ರದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಮಾಡದ ಸೇವೆಗಳನ್ನು ಸಹಕಾರಿ ಬ್ಯಾಂಕುಗಳು ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸ್ಥಳಾಂತರ ಗೊಂಡ ಶಾಖೆಯನ್ನು ಕಂಕನಾಡಿ ಬೈಪಾಸ್ ರಸ್ತೆ ಬಳಿ ಇರುವ ಕಣಚೂರು ಕಾಂಪ್ಲೆಕ್ಸ್ ಕಟ್ಟಡದಲ್ಲಿಂದು ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು.

ಎಸ್ ಸಿಡಿಸಿಸಿ ಬ್ಯಾಂಕ್ ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ರೀತಿಯ ಸೇವೆಯನ್ನು ಮಾಡಿ ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. ಸಮರ್ಥ ನಾಯಕತ್ವ, ಉತ್ತಮ ಗ್ರಾಹಕ ಸೇವೆಯಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನೆ ಮಾಡಿದೆ ಎಂದು ವೇದವ್ಯಾಸ ಕಾಮತ್ ಶ್ಲಾಘಿಸಿದರು.

ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ , ಬ್ಯಾಂಕ್ ನ ಠೇವಣಿ ಕಳೆದ 25 ವರ್ಷ ಗಳಲ್ಲಿ 25 ಕೋಟಿಯಿಂದ 3,500 ಕೋಟಿ ರೂಗೆ ಏರಿಕೆಯಾಗಿದೆ. ಜನರ ಬಳಿಗೆ ಹೋಗಿ ಸೇವೆ ಸಲ್ಲಿಸಬೇಕು ಎನ್ನುವ ನೆಲೆಯಲ್ಲಿ ಶಾಖೆಯ ವಿಸ್ತರಣೆ, ಸ್ಥಳಾಂತರ, ಶಾಖೆಯನ್ನು ಜನರ ಬಳಿ ತೆಗೆದುಕೊಂಡು ಹೋಗುತ್ತಿದ್ದೇವೆ. ಸಮಾಜದ ಅತ್ಯಂತ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಗ್ರಾಹಕ ಸೇವೆ ದೊರೆಯಬೇಕು ಎನ್ನುವುದು ನಮ್ಮ ಗುರಿ ಇದೆ. ಸಹಕಾರಿ ಕ್ಷೇತ್ರದ ಮೇಲೆ ಜನರ ವಿಶ್ವಾಸ ಹೆಚ್ಚುತ್ತಿದೆ. ಸಹಕಾರಿ ಕ್ಷೇತ್ರವನ್ನು ಬಲಿಷ್ಠಗೊಳಿಸಬೇಕಾಗಿದೆ ಎಂದು  ತಿಳಿಸಿದರು.

ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ್ ಭಟ್, ಭಾಸ್ಕರ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ್, ಜಯರಾಮ ರೈ, ವಾದಿರಾಜ ಶೆಟ್ಟಿ, ಶಶಿ ಕುಮಾರ್ ರೈ, ಮಹೇಶ್ ಹೆಗ್ಡೆ, ಜಯರಾಜ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಜಿ, ಶಾಖಾ ವ್ಯವಸ್ಥಾಪಕರಾದ ಮಮತಾ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

17 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

18 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

19 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

19 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

20 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

20 hours ago