Featured

ಎ.10ರಂದು ‘ಜನಾಕ್ರೋಶ ಯಾತ್ರೆ’ ಉಡುಪಿಗೆ ಆಗಮನ :  ಕಿಶೋರ್ ಕುಮಾರ್ – vishwanews24

ಎ.10ರಂದು ‘ಜನಾಕ್ರೋಶ ಯಾತ್ರೆ’ ಉಡುಪಿಗೆ ಆಗಮನ :  ಕಿಶೋರ್ ಕುಮಾರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯು ಎ.10ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಂತರ ಕಲ್ಸಂಕ, ಕಡಿಯಾಳಿ ಮಾರ್ಗವಾಗಿ ಬಿಜೆಪಿ ಕಚೇರಿಯ ಹಿಂಭಾಗದ ಮೈದಾನದವರೆಗೆ ಪ್ರತಿಭಟನಾ ಜಾಥಾ ಸಾಗಿ ಬರಲಿದೆ. ಬಳಿಕ ಮೈದಾನದಲ್ಲಿ ಬಹೃತ್ ಪ್ರತಿಭಟನಾ ಸಮಾವೇಶ ನಡೆಯಲಿದೆ ಎಂದರು.
ಜಾಥಾದಲ್ಲಿ ವಿವಿಧ ಮೋರ್ಚಾ, ಮಂಡಲಗಳಿಂದ ವಿನೂತನ ಟ್ಯಾಬ್ಲೋ ನಿರ್ಮಿಸಿ, ಅದರ ಮೂಲಕ ಸರಕಾರದ ಜನವಿರೋಧಿ ನೀತಿಗೆ ಖಂಡನೆ ವ್ಯಕ್ತಪಡಿಸಲಾಗುವುದು.

ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ತಂಡದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ್ ಶೆಟ್ಟಿ, ರಾಘವೇಂದ್ರ ಕಿಣಿ, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

9 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

11 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

11 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago