Featured

ಎ. 13ರಂದು ಮೋದಿ ಉಡುಪಿಗೆ ; ಕರಾವಳಿಯಲ್ಲಿ ಮತ್ತೊಮ್ಮೆ ಮೋದಿ ಹವ ; ಗರಿಗೆದರಿದ ಅಬ್ಬರದ ಚುನಾವಣಾ ಪ್ರಚಾರ – Vishwanews24

ಉಡುಪಿ: ಲೋಕಸಭಾ ಚುನಾ ವಣೆ ಪ್ರಚಾರಕ್ಕಾಗಿ ರಾಷ್ಟ್ರೀಯ ಅಧ್ಯಕ್ಷರ ಸಹಿತ ಸ್ಟಾರ್‌ ನಾಯಕರನ್ನು ಕರಾವಳಿಗೆ ಕರೆತರುವ ಪ್ರಯತ್ನದಲ್ಲಿ ವಿವಿಧ ರಾಜಕೀಯ ಪಕ್ಷಗಳು ತೊಡಗಿವೆ. ಇನ್ನು ಮೂರು ನಾಲ್ಕು ದಿನಗಳಲ್ಲಿ ಎಲ್ಲವೂ ಅಂತಿಮಗೊಳ್ಳಲಿದೆ.

ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಎ. 13ರಂದು ಉಡುಪಿಗೆ ಆಗಮಿಸುವುದು ಖಚಿತವಾಗಿದೆ. ಮಾತ್ರವಲ್ಲ, ಚಿಕ್ಕಮಗಳೂರಿಗೆ ಎ. 15ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಅವರನ್ನು ಮಂಗಳೂರಿಗೆ ಕರೆತರುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿದೆ. ಬಿಜೆಪಿಯು ಉಭಯ ಜಿಲ್ಲೆಗಳಲ್ಲಿ ರಾಷ್ಟ್ರೀಯ ನಾಯಕರಿಂದಲೇ ಪ್ರಚಾರ ಮಾಡಿಸಿ ರಂಗು ಮೂಡಿಸುವ ಉತ್ಸಾಹದಲ್ಲಿದೆ.

ಜಿಲ್ಲೆಯ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಮಯವಿನ್ನೂ ನಿರ್ಧಾರವಾಗಿಲ್ಲ. ಎರಡು ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು, ಉಡುಪಿಯ ಕಾರ್ಯಕ್ರಮ ಉಡುಪಿ – ಚಿಕ್ಕಮಗಳೂರು, ದ.ಕ., ಶಿವಮೊಗ್ಗ, ಉ.ಕ. ಜಿಲ್ಲೆಯ ಆಂಶಿಕ ಭಾಗವನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

1 day ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago