ಕಾರ್ಕಳ: ವಿಧಾನಸಭೆಯ ಚುನಾವಣೆಗೆ ಪಕ್ಷ ಅಧಿಕೃತ ಅಭ್ಯರ್ಥಿಯನ್ನಾಗಿ ತನ್ನನ್ನು ಘೋಷಣೆ ಮಾಡಿದೆ. ಚುನಾವಣಾ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಎ. 13ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಮಂಜುನಾಥ ಪೈ ಸಭಾಭವನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದರು.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸಕಲ ಸಿದ್ದತೆಯನ್ನು ಬಿಜೆಪಿ ನಡೆಸುತ್ತಿದೆ ಎಂದರು.
ಎ. 18ರಂದು ಮನೆಮನೆ ಸಂಪರ್ಕದ ಅಭಿಯಾನ ಪ್ರಾರಂಭವಾಗಲಿದೆ. ಎ. 23ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಬೆಳಗ್ಗೆ 10 ಗಂಟೆಗೆ ಅನಂತಶಯನ ವೃತ್ತದಿಂದ ಮೆರವಣಿಗೆ ನಡೆಯಲಿದೆ. 11 ಗಂಟೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. 11.30ರಿಂದ ಕುಕ್ಕುಂದೂರು ಪಂಚಾಯತ್ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.
ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಜಾತಿರಾಜಕಾರಣ, ಹಣದ ಆಮಿಷ ಒಡ್ಡುತ್ತಾ ಕೀಳು ರಾಜಕೀಯ ನಡೆಸುತ್ತಿದೆ. ಆದರೆ ಬಿಜೆಪಿ ಅಭಿವೃದ್ಧಿಯ ದೃಷ್ಟಿಯಿಂದ ರಾಜಕೀಯ ನಡೆಸುತ್ತಿದೆ ಎಂದರು.
ಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಣಿರಾಜ್ ಶೆಟ್ಟಿ, ವಕ್ತಾರ ಹರೀಶ್ ಶೆಣೈ, ನಗರ ಅಧ್ಯಕ್ಷ ಅನಂತಕೃಷ್ಣ ಶೆಣೈ, ಆನಂದ ಬಂಡೀಮಠ, ದಯಾನಂದ ಹೆಗ್ಡೆ ಉಪಸ್ಥಿತರಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…