Featured

ಎ.16 ರಿಂದ 18 ರವರೆಗೆ ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್‌ನ ಜನತಾ ಜಲಧಾರೆ ರಥಯಾತ್ರೆ  – Vishwanews24

ಎ.16ರಿಂದ 18ರವರೆಗೆ ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್‌ನ ಜನತಾ ಜಲಧಾರೆ ರಥಯಾತ್ರೆ

ಉಡುಪಿ : 2023ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿ ರಿಸಿಕೊಂಡು ಜಾತ್ಯತೀತ ಜನತಾದಳ ರಾಜ್ಯಾದ್ಯಂತ ನಡೆಸಲಿರುವ ‘ಜನತಾ ಜಲಧಾರೆ’ ರಥಯಾತ್ರೆ ಎ.16ರಿಂದ 18ರವರೆಗೆ ಉಡುಪಿ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಜೆಡಿಎಸ್‌ನ ಜಿಲ್ಲಾಧ್ಯಕ್ಷ ಯೋಗೇಶ್ ವಿ.ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗೇಶ್ ಶೆಟ್ಟಿ, ರಾಜ್ಯದ ಸಮಗ್ರ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗೆ ಆದ್ಯತೆ ನೀಡುವ, ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಕಾಯಕಲ್ಪ ನೀಡುವ ಸಂಕಲ್ಪದೊಂದಿಗೆ ರಾಜ್ಯದ ಪ್ರಮುಖ ನದಿಗಳಿಂದ ೯೪ ಸ್ಥಳಗಳಲ್ಲಿ ಜನಸಂಗ್ರಹಣೆ ನಡೆಯಲಿದ್ದು, ಅವುಗಳನ್ನು ಕಲಶದಲ್ಲಿ ಜಲಯಾತ್ರೆಯ ಮೂಲಕ ಬೆಂಗಳೂರಿಗೆ ಕೊಂಡೊಯ್ಯ ಲಾಗುವುದು ಎಂದರು.

ರಾಜ್ಯದ ಒಟ್ಟು ೧೫ ಕಡೆಗಳಿಂದ ಈ ರಥಯಾತ್ರೆ ಹೊರಡಲಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿ ಈ ಜಲಯಾತ್ರೆ ಎ.೧೬ರಂದು ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಯಿಂದ ಕಲಶದಲ್ಲಿ ನೀರು ಸಂಗ್ರಹಿಸುವ ಮೂಲಕ ಪ್ರಾರಂಭಗೊಳ್ಳಲಿದೆ. ಉಡುಪಿ ಜಿಲ್ಲೆಯಲ್ಲಿ ಸೌಪರ್ಣಿಕ, ವಾರಾಹಿ, ಸೀತಾನದಿಗಳಿಂದ ಹಾಗೂ ದಕ್ಷಿಣ ಕನ್ನಡದಲ್ಲಿ ಶಾಂಭವಿ ನದಿ, ನೇತ್ರಾವತಿ ಹಾಗೂ ಕುಮಾರಧಾರ ನದಿಗಳಿಂದ ಜಲಸಂಗ್ರಹಣೆ ನಡೆಯಲಿದೆ ಎಂದರು.

ಎ.೧೬ರ ಬೆಳಗ್ಗೆ ೧೧ಗಂಟೆಗೆ ಸೌಪರ್ಣಿಕ ನದಿಯಿಂದ ನೀರನ್ನು ಸಂಗ್ರಹಿಸಿದ ಬಳಿಕ ಎರಡನೇ ದಿನ ಸೌಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ವಾರಾಹಿ ನದಿ ನೀರನ್ನು ಮೂರನೇ ದಿನ ಕಾರ್ಕಳದ ಕುಚ್ಚೂರು ಬಳಿ ಸೀತಾನದಿಯನ್ನು ಸಂಗ್ರಹಿಸಲಾಗುತ್ತದೆ. ೧೮ರಂದು ಈ ರಥಯಾತ್ರೆ ಕಾಪು ಮೂಲಕ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಿ ಅಲ್ಲಿನ ಮೂರು ನದಿಗಳಿಂದ ಜಲ ಸಂಗ್ರಹಿಸಿ ಬೆಂಗಳೂರಿಗೆ ತೆರಳಲಿದೆ ಎಂದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ನೀರು ಸಂಗ್ರಹಿಸಿಕೊಂಡು ಜಲಧಾರೆ ಬೆಂಗಳೂರಿನಲ್ಲಿ ಸೇರಲಿದ್ದು, ಅಲ್ಲಿ ಐದು ಲಕ್ಷ ಜನರನು ಸೇರಿಸಿ ಬೃಹತ್ ಸಮಾವೇಶವೊಂದನ್ನು ಆಯೋಜಿಸಲಾಗುವುದು ಎಂದು ಯೋಗೇಶ್ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ನ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ಜಿಲಾಲ ಕಾರ್ಯದರ್ಶಿ ಜಯರಾಮ ಆಚಾರ್ಯ, ಯುವ ಜನತಾ ದಳದ ಸಂಜಯ್, ಉದಯ ಶೆಟ್ಟಿ ಹಾಗೂ ಆದಿತ್ಯ ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago