ಮಂಗಳೂರು, (Vishwanews24) : ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಎಪ್ರಿಲ್ 8 ಮತ್ತು 9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಎಪ್ರಿಲ್ 8 ರಂದು ಸಂಜೆ 4.10 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಸ್ಥಳೀಯರಿಂದ ಮನವಿ ಸ್ವೀಕರಿಸಲಿದ್ದಾರೆ. ಸಂಜೆ 5.30ಕ್ಕೆ ಪುತ್ತೂರು ನೆಹರು ನಗರದ ವಿವೇಕಾನಂದ ಕ್ಯಾಂಪಸ್‍ನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದವರು ನಿರ್ಮಿಸಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (CBSC) ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ : ಕೋವಿಡ್ ತಪಾಸಣೆ, ಮಾರ್ಗಸೂಚಿ ಪಾಲನೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಸಂಜೆ 6.30ಕ್ಕೆ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ 20ನೇ ವರ್ಷದ (ವಿಂಶತಿ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ರಾತ್ರಿ 8ಕ್ಕೆ ಗಂಟೆಗೆ ಪುತ್ತೂರು ತಾಲೂಕಿನ ಕೆಳಗಿನ ಕುಂಜಾಡಿ ಗ್ರಾಮದಲ್ಲಿ ನಡೆಯಲಿರುವ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಪುತ್ತೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಎಪ್ರಿಲ್ 9 ರಂದು ಬೆಳಿಗ್ಗೆ 9 ಗಂಟೆಗೆ ಕಡಬ ತಾಲೂಕಿನ ರಾಮಕುಂಜದ ಶ್ರೀ ರಾಮ ಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…