ಮಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಎ.9ರಂದು ಮಧ್ಯಾಹ್ನ 3 ಕ್ಕೆ ನಗರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಇದರಲ್ಲಿ ಎಲ್ಲ ಜಿಲ್ಲಾ ಘಟಕಗಳಿಗೆ ಭಾಗವಹಿಸಲು ಸೂಚಿಸಲಾಗಿದೆ. ಇದರೊಂದಿಗೆ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಕಾರ್ಯಕರ್ತರು ಭಾಗವಹಿಸುವರು ಎಂದು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಡಾ|ಬಿ.ಆರ್ ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿಯಿರುವ ಮಿನಿ ವಿಧಾನಸೌಧದ ತನಕ ಪಾದಯಾತ್ರೆ ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷನಾಯಕ ಆರ್. ಅಶೋಕ್ ಸೇರಿದಂತೆ ವಿವಿಧ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಪೂರ್ವಭಾವಿ ಸಭೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾೖಕ್, ಡಿ. ವೇದವ್ಯಾಸ ಕಾಮತ್, ಡಾ|ವೈ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿ.ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕರಾದ ಕೆ.ಮೋನಪ್ಪ ಭಂಡಾರಿ, ಕ್ಯಾ| ಗಣೇಶ್ ಕಾರ್ಣಿಕ್, ಸಂಜೀವ ಮಠಂದೂರು, ಕಾರ್ಯಕ್ರಮದ ಉಸ್ತುವಾರಿ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಪ್ರಸ್ತಾವಿಸಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್ ನಿರೂಪಿಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ಎ.ರಾವ್ ವಂದಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…