Featured

ಎ.9ರಂದು ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ – vishwanews24

ಎ.9ರಂದು ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ

ಮಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಎ.9ರಂದು ಮಧ್ಯಾಹ್ನ 3 ಕ್ಕೆ ನಗರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಇದರಲ್ಲಿ ಎಲ್ಲ ಜಿಲ್ಲಾ ಘಟಕಗಳಿಗೆ ಭಾಗವಹಿಸಲು ಸೂಚಿಸಲಾಗಿದೆ. ಇದರೊಂದಿಗೆ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಕಾರ್ಯಕರ್ತರು ಭಾಗವಹಿಸುವರು ಎಂದು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಡಾ|ಬಿ.ಆರ್‌ ಅಂಬೇಡ್ಕರ್‌ (ಜ್ಯೋತಿ) ವೃತ್ತದಿಂದ ಮಂಗಳೂರಿನ ಕ್ಲಾಕ್‌ ಟವರ್‌ ಬಳಿಯಿರುವ ಮಿನಿ ವಿಧಾನಸೌಧದ ತನಕ ಪಾದಯಾತ್ರೆ ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷನಾಯಕ ಆರ್‌. ಅಶೋಕ್‌ ಸೇರಿದಂತೆ ವಿವಿಧ ನಾಯಕರು ಭಾಗವಹಿಸಲಿದ್ದಾರೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ, ಶಾಸಕರಾದ ಹರೀಶ್‌ ಪೂಂಜಾ, ಉಮಾನಾಥ್‌ ಕೋಟ್ಯಾನ್‌, ರಾಜೇಶ್‌ ನಾೖಕ್‌, ಡಿ. ವೇದವ್ಯಾಸ ಕಾಮತ್‌, ಡಾ|ವೈ.ಭರತ್‌ ಶೆಟ್ಟಿ, ಭಾಗೀರಥಿ ಮುರುಳ್ಯ, ವಿ.ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ, ಮಾಜಿ ಶಾಸಕರಾದ ಕೆ.ಮೋನಪ್ಪ ಭಂಡಾರಿ, ಕ್ಯಾ| ಗಣೇಶ್‌ ಕಾರ್ಣಿಕ್‌, ಸಂಜೀವ ಮಠಂದೂರು, ಕಾರ್ಯಕ್ರಮದ ಉಸ್ತುವಾರಿ ಉದಯ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಪ್ರಸ್ತಾವಿಸಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯತೀಶ್‌ ಆರ್ವಾರ್‌ ನಿರೂಪಿಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ಎ.ರಾವ್‌ ವಂದಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago