ಮುಂಬೈ: ಮಹಾರಾಷ್ಟ್ರದಲ್ಲಿ ಸಿಎಂ ಉದ್ದವ್ ಠಾಕ್ರೆ ವಿರುದ್ದ ಬಂಡಾಯವೆದ್ದ ನಾಯಕ ಏಕನಾಥ್ ಶಿಂಧೆ ಅವರಿಗೆ ಉದ್ದವ್ ಠಾಕ್ರೆ ಹಾಗೂ ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಮುಖ್ಯಮಂತ್ರಿ ಸ್ಥಾನದ ಆಫರ್ ನೀಡಿದ್ದಾರೆ. ಆದರೆ ಶಿಂಧೆ ಇದನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ಏಕನಾಥ ಶಿಂಧೆ ಅವರೊಂದಿಗೆ ಕೆಲವು ಶಾಸಕರು ಕೂಡಾ ಬಂಡಾಯ ಗುಂಪಿನಲ್ಲಿ ಕಾಣಿಸಿಕೊಂಡ ಕಾರಣ ಮಹಾ ಸರ್ಕಾರ ಪಥನವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದ ನಡುವೆ ರಾತ್ರೋರಾತ್ರಿ ಸಿಎಂ ಉದ್ದವ್ ಠಾಕ್ರೆ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿ ಬಾಂದ್ರಾದಲ್ಲಿರುವ ಕುಟುಂಬದ ಮಾತೋಶ್ರೀಗೆ ತೆರಳಿದ್ದರು. ಈ ನಡುವೆ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ವಸತಿ ಸಚಿವ ಜಿತೇಂದ್ರ ಅಹ್ವಾದ್ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೋರಿದ್ದರು.
ಅಲ್ಲದೆ ತಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದವಿದ್ದು, ಬಂಡಾಯ ಶಾಸಕರು ಸಿಎಂ ಆಗಬಹುದು. ಆದರೆ ಅವರು ಶಿವಸೇನೆಯವರೇ ಆಗಿರಬೇಕು ಎಂದು ಉದ್ದವ್ ಠಾಕ್ರೆ ಕೂಡಾ ಹೇಳಿದ್ದರು. ಆದರೆ ಬಂಡಾಯ ಗುಂಪಿನಲ್ಲಿ ಅತಿಹೆಚ್ಚು ಸಂಖ್ಯಾಬಲ ಹೊಂದಿರುವ ಶಿಂಧೆ ಅವರು ಈ ಆಫರ್‌ನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…