Featured

ಏಕನಾಥ್ ಶಿಂಧೆಗೆ ಸಿಎಂ ಆಫರ್ ನೀಡಿದ ಉದ್ಧವ್ ಠಾಕ್ರೆ : ತಿರಸ್ಕರಿಸಿದ ಬಂಡಾಯ ನಾಯಕ – VIshwanews24

ಏಕನಾಥ್ ಶಿಂಧೆಗೆ ಸಿಎಂ ಆಫರ್ ನೀಡಿದ ಉದ್ಧವ್ ಠಾಕ್ರೆ : ತಿರಸ್ಕರಿಸಿದ ಬಂಡಾಯ ನಾಯಕ

ಮುಂಬೈ: ಮಹಾರಾಷ್ಟ್ರದಲ್ಲಿ ಸಿಎಂ ಉದ್ದವ್ ಠಾಕ್ರೆ ವಿರುದ್ದ ಬಂಡಾಯವೆದ್ದ ನಾಯಕ ಏಕನಾಥ್ ಶಿಂಧೆ ಅವರಿಗೆ ಉದ್ದವ್ ಠಾಕ್ರೆ ಹಾಗೂ ಎನ್‌ಸಿಪಿ ನಾಯಕ ಶರದ್ ಪವಾರ್‍ ಅವರು ಮುಖ್ಯಮಂತ್ರಿ ಸ್ಥಾನದ ಆಫರ್‍ ನೀಡಿದ್ದಾರೆ. ಆದರೆ ಶಿಂಧೆ ಇದನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಏಕನಾಥ ಶಿಂಧೆ ಅವರೊಂದಿಗೆ ಕೆಲವು ಶಾಸಕರು ಕೂಡಾ ಬಂಡಾಯ ಗುಂಪಿನಲ್ಲಿ ಕಾಣಿಸಿಕೊಂಡ ಕಾರಣ ಮಹಾ ಸರ್ಕಾರ ಪಥನವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದ ನಡುವೆ ರಾತ್ರೋರಾತ್ರಿ ಸಿಎಂ ಉದ್ದವ್ ಠಾಕ್ರೆ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿ ಬಾಂದ್ರಾದಲ್ಲಿರುವ ಕುಟುಂಬದ ಮಾತೋಶ್ರೀಗೆ ತೆರಳಿದ್ದರು. ಈ ನಡುವೆ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ವಸತಿ ಸಚಿವ ಜಿತೇಂದ್ರ ಅಹ್ವಾದ್ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೋರಿದ್ದರು.

ಅಲ್ಲದೆ ತಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದವಿದ್ದು, ಬಂಡಾಯ ಶಾಸಕರು ಸಿಎಂ ಆಗಬಹುದು. ಆದರೆ ಅವರು ಶಿವಸೇನೆಯವರೇ ಆಗಿರಬೇಕು ಎಂದು ಉದ್ದವ್ ಠಾಕ್ರೆ ಕೂಡಾ ಹೇಳಿದ್ದರು. ಆದರೆ ಬಂಡಾಯ ಗುಂಪಿನಲ್ಲಿ ಅತಿಹೆಚ್ಚು ಸಂಖ್ಯಾಬಲ ಹೊಂದಿರುವ ಶಿಂಧೆ ಅವರು ಈ ಆಫರ್‌ನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

4 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

4 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

4 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

6 hours ago