ಗುರುಗ್ರಾಮ : ಸ್ಲೀಪರ್ ಬಸ್ ಗೆ ಏಕಾಏಕಿ ಹೊತ್ತಿ ಉರಿದ ಪರಿಣಾಮ, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾದ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ. ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್‌ಗೆ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ನಿದ್ರಾವಸ್ಥೆಯಲ್ಲಿದ್ದ ಇಬ್ಬರು ಬೆಂಕಿ ಕೆನ್ನಾಲಿಗೆಗೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸ್ಲೀಪರ್ ಬಸ್‌ನಿಂದ ಎರಡು ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೊಂದೆಡೆ, ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ದೆಹಲಿ ಜೈಪುರ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಆಗಿತ್ತು. ಜಾಮ್ ತೆರವುಗೊಳಿಸಲು ಪೊಲೀಸ್ ಸಿಬ್ಬಂದಿ ತುಂಬಾ ಕಷ್ಟಪಡುವಂತಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…