ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ನಟ ಸಲ್ಮಾನ್ ಖಾನ್ಗೆ ಜೋಧಪುರ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ರವೀಂದ್ರ ಕುಮಾರ್ ಜೋಶಿ ಜಾಮೀನು ನೀಡಿ ತೀರ್ಪು ಪ್ರಕಟಿಸಿದರು. ಜೋಧಪುರ ಜೆಎಂಸಿ ನ್ಯಾಯಾಲಯ ಸಲ್ಮಾನ್ ಖಾನ್ಗೆ ಕಳೆದ ಗುರುವಾರ ಶಿಕ್ಷೆ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಸಲ್ಮಾನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಜೋಧಪುರ ಸೆಷನ್ಸ್ ನ್ಯಾಯಾಲಯದ ನ್ಯಾ.ರವೀಂದ್ರ ಕುಮಾರ್ ಜೋಶಿ ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಿದ್ದರು.
ಶನಿವಾರ ಬೆಳಿಗ್ಗೆ ಪುನಃ ವಿಚಾರಣೆ ಆರಂಭಿಸಿದ ನ್ಯಾಯಾಲಯ ಮಧ್ಯಾಹ್ನ ಜಾಮೀನು ಮಂಜೂರು ಮಾಡಿದೆ. ಸಲ್ಮಾನ್ ನಟನೆಯ ಸಿನಿಮಾಗಳ ಮೇಲೆ ಕೋಟ್ಯಂತರ ರುಪಾಯಿ ಹೂಡಿಕೆ ಮಾಡಿದ್ದ ಬಾಲಿವುಡ್ನ ನಿರ್ಮಾಪಕರು ಸದ್ಯ ನಿರಾಳರಾಗಿ ದ್ದಾರೆ. ಸಲ್ಮಾನ್ ಜೈಲು ಸೇರಿದ್ದರಿಂದ 800 ಕೋಟಿ ಮೊತ್ತದ ಸಿನಿಮಾಗಳ ಭವಿಷ್ಯ ಅತಂತ್ರವಾಗಿತ್ತು. ಭಾರಿ ಪ್ರಮಾಣದ ನಷ್ಟ ಉಂಟಾಗಲಿದೆ ಎಂದು ನಿರ್ಮಾಪಕರು ಕಳವಳ ವ್ಯಕ್ತಪಡಿಸಿದ್ದರು.
ರಾಜಸ್ಥಾನದ ವಿವಿಧ ನ್ಯಾಯಾಲಯಗಳಿಂದ ನ್ಯಾಯಾಧೀಶರನ್ನು ಶುಕ್ರವಾರ ರಾತ್ರಿ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ ಸಲ್ಮಾನ್ ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿದ್ದ ರವೀಂದ್ರ ಜೋಶಿ ಮತ್ತು ಸಲ್ಮಾನ್ಗೆ ಐದು ವರ್ಷ ಶಿಕ್ಷೆ ವಿಧಿಸಿದ ದೇವ್ ಕುಮಾರ್ ಖತ್ರಿ ಸೇರಿದ್ದರು. ತೀರ್ಪು ಪ್ರಕಟಿಸುವುದಕ್ಕೂ ಮುನ್ನ ನ್ಯಾಯಾಧೀಶರು ಸೆಷನ್ಸ್ ನ್ಯಾಯಾಲಯದಲ್ಲಿ ಸಮಾಲೋಚನೆ ನಡೆಸಿದ್ದರು. ನ್ಯಾ.ಜೋಶಿ ಅವರ ವರ್ಗಾವಣೆಯಿಂದ ಸಲ್ಮಾನ್ ಜಾಮೀನು ಅರ್ಜಿಯ ಭವಿಷ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು.
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ಪರಿಗಣಿಸಿದ್ದ ಜೋಧಪುರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಸಹ ಆರೋಪಿಗಳಾಗಿದ್ದ ನಟರಾದ ಸೈಫ್ ಅಲಿಖಾನ್, ಸೊನಾಲಿ ಬೇಂದ್ರೆ, ಟಬು, ನೀಲಂ ಕೊಠಾರಿ ಮತ್ತು ಸ್ಥಳೀಯ ಪ್ರವಾಸಿ ಗೈಡ್ ವಿರುದ್ಧ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಅವರನ್ನು ಖುಲಾಸೆ ಮಾಡಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…