Featured

ಏಕ್ ಥಾ ಟೈಗರ್ ‘ಸಲ್ಲು’ ಗೆ ಜಾಮೀನು

ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ನಟ ಸಲ್ಮಾನ್ ಖಾನ್‌ಗೆ ಜೋಧಪುರ ಸೆಷನ್ಸ್ ನ್ಯಾಯಾಲಯ  ಜಾಮೀನು ಮಂಜೂರು ಮಾಡಿದೆ.

ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ರವೀಂದ್ರ ಕುಮಾರ್ ಜೋಶಿ ಜಾಮೀನು ನೀಡಿ ತೀರ್ಪು ಪ್ರಕಟಿಸಿದರು. ಜೋಧಪುರ ಜೆಎಂಸಿ ನ್ಯಾಯಾಲಯ ಸಲ್ಮಾನ್ ಖಾನ್‌ಗೆ ಕಳೆದ ಗುರುವಾರ ಶಿಕ್ಷೆ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಸಲ್ಮಾನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಜೋಧಪುರ ಸೆಷನ್ಸ್ ನ್ಯಾಯಾಲಯದ ನ್ಯಾ.ರವೀಂದ್ರ ಕುಮಾರ್ ಜೋಶಿ ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಿದ್ದರು.

ಶನಿವಾರ ಬೆಳಿಗ್ಗೆ ಪುನಃ ವಿಚಾರಣೆ ಆರಂಭಿಸಿದ ನ್ಯಾಯಾಲಯ ಮಧ್ಯಾಹ್ನ ಜಾಮೀನು ಮಂಜೂರು ಮಾಡಿದೆ. ಸಲ್ಮಾನ್ ನಟನೆಯ ಸಿನಿಮಾಗಳ ಮೇಲೆ ಕೋಟ್ಯಂತರ ರುಪಾಯಿ ಹೂಡಿಕೆ ಮಾಡಿದ್ದ ಬಾಲಿವುಡ್‌ನ ನಿರ್ಮಾಪಕರು ಸದ್ಯ ನಿರಾಳರಾಗಿ ದ್ದಾರೆ. ಸಲ್ಮಾನ್ ಜೈಲು ಸೇರಿದ್ದರಿಂದ 800 ಕೋಟಿ ಮೊತ್ತದ ಸಿನಿಮಾಗಳ ಭವಿಷ್ಯ ಅತಂತ್ರವಾಗಿತ್ತು. ಭಾರಿ ಪ್ರಮಾಣದ ನಷ್ಟ ಉಂಟಾಗಲಿದೆ ಎಂದು ನಿರ್ಮಾಪಕರು ಕಳವಳ ವ್ಯಕ್ತಪಡಿಸಿದ್ದರು.

ರಾಜಸ್ಥಾನದ ವಿವಿಧ ನ್ಯಾಯಾಲಯಗಳಿಂದ ನ್ಯಾಯಾಧೀಶರನ್ನು ಶುಕ್ರವಾರ ರಾತ್ರಿ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ ಸಲ್ಮಾನ್ ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿದ್ದ ರವೀಂದ್ರ ಜೋಶಿ ಮತ್ತು ಸಲ್ಮಾನ್‌ಗೆ ಐದು ವರ್ಷ ಶಿಕ್ಷೆ ವಿಧಿಸಿದ ದೇವ್ ಕುಮಾರ್ ಖತ್ರಿ ಸೇರಿದ್ದರು. ತೀರ್ಪು ಪ್ರಕಟಿಸುವುದಕ್ಕೂ ಮುನ್ನ ನ್ಯಾಯಾಧೀಶರು ಸೆಷನ್ಸ್ ನ್ಯಾಯಾಲಯದಲ್ಲಿ ಸಮಾಲೋಚನೆ ನಡೆಸಿದ್ದರು. ನ್ಯಾ.ಜೋಶಿ ಅವರ ವರ್ಗಾವಣೆಯಿಂದ ಸಲ್ಮಾನ್‌ ಜಾಮೀನು ಅರ್ಜಿಯ ಭವಿಷ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು.

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್‌ ಅವರನ್ನು ದೋಷಿ ಎಂದು ಪರಿಗಣಿಸಿದ್ದ ಜೋಧಪುರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಸಹ ಆರೋಪಿಗಳಾಗಿದ್ದ ನಟರಾದ ಸೈಫ್ ಅಲಿಖಾನ್, ಸೊನಾಲಿ ಬೇಂದ್ರೆ, ಟಬು, ನೀಲಂ ಕೊಠಾರಿ ಮತ್ತು ಸ್ಥಳೀಯ ಪ್ರವಾಸಿ ಗೈಡ್ ವಿರುದ್ಧ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಅವರನ್ನು ಖುಲಾಸೆ ಮಾಡಲಾಗಿತ್ತು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago