Featured

ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕಾಗಿ ಕೆಲಸ ಮಾಡುವೆ : ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು – Vishwanews24

ಮಹಿಳಾ ಸಬಲೀಕರಣ ನನ್ನ ಮೊದಲ ಆದ್ಯತೆ

ಸ್ವಾತಂತ್ರ್ಯ ಭಾರತದಲ್ಲಿ ಹುಟ್ಟಿದ ಮೊದಲ ರಾಷ್ಟ್ರಪತಿಯಾಗಿದ್ದೇನೆ..

ಬಡವರು ಕನಸು ಕಾಣುವುದಷ್ಟೇ ಅಲ್ಲ, ಈಡೇರಿಸಬಹುದು ಎಂಬುದಕ್ಕೆ ನಾನೇ ನಿದರ್ಶನ

ಸಂವಿಧಾನದ ಮೇಲೆ ಪೂರ್ಣ ನಿಷ್ಠೆ ಇಟ್ಟು ಕೆಲಸ ಮಾಡುವೆ..

15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು

ನವದೆಹಲಿ: 15ನೇ ರಾಷ್ಟ್ರಪತಿಯಾಗಿ ಇಂದು ದ್ರೌಪದಿ ಮುರ್ಮು ಅಧಿಕಾರ ಸ್ವೀಕರಿಸಿದ್ದಾರೆ.

ಸೆಂಟ್ರಲ್ ಹಾಲ್‍ನಲ್ಲಿ ಮುರ್ಮು ಅವರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಿದರು.

ಈ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ಮೋದಿ ಆದಿಯಾಗಿ ಸಚಿವರು ಸಂಸದರು ಉಪಸ್ಥಿತರಿದ್ದರು.

ಅಧಿಕಾರ ಸ್ವೀಕರಿಸಿದ ನಂತರ ಭಾಷಣ ಮಾಡಿದ ಅವರು, ನಾನು ಹುಟ್ಟಿದಾಗ ದೇಶ ಸ್ವಾತಂತ್ರ್ಯ ಸಂಭ್ರಮದಲ್ಲಿತ್ತು. ಈಗ 75 ವರ್ಷದ ಸಂಭ್ರಮದಲ್ಲಿ ನಾನು ರಾಷ್ಟ್ರಪತಿಯಾಗುತ್ತಿದ್ದೇನೆ. ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕಾಗಿ ಕೆಲಸ ಮಾಡುವೆ. ಮಹಿಳಾ ಸಬಲೀಕರಣ ನನ್ನ ಮೊದಲ ಆದ್ಯತೆ ಎಂದು ಹೇಳಿದರು.

ಬಡವರು ಕನಸು ಕಾಣಬಹುದು, ಅದನ್ನು ನನಸು ಮಾಡಿಕೊಳ್ಳಬಹುದು. ನನ್ನ ಹಳ್ಳಿಯಲ್ಲಿ ಕಾಲೇಜಿಗೆ ತೆರಳಿದ ಮೊದಲ ಮಹಿಳೆ ನಾನು. ಸ್ವಾತಂತ್ರ್ಯ ಭಾರತದಲ್ಲಿ ಹುಟ್ಟಿದ ಮೊದಲ ರಾಷ್ಟ್ರಪತಿಯಾಗಿದ್ದೇನೆ. ಸಂವಿಧಾನದ ಮೇಲೆ ಪೂರ್ಣ ನಿಷ್ಠೆ ಇಟ್ಟು ಕೆಲಸ ಮಾಡುವೆ ಎಂದು ಪ್ರತಿಜ್ಞೆ ಮಾಡಿದರು.

ದ್ರೌಪದಿ ಮುರ್ಮು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದವರಾಗಿದ್ದಾರೆ. 20 ಜೂನ್ 1958 ಜನಿಸಿದ ಅವರು ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಯಾಗಿದ್ದು, ಸ್ವಾತಂತ್ರ್ಯೊತ್ತರ ಜನಿಸಿದ ವ್ಯಕ್ತಿಯೊಬ್ಬರು ರಾಷ್ಟ್ರಪತಿಯಾಗಿತ್ತಿರುವುದು ಇದೇ ಮೊದಲು. ದ್ರೌಪದಿ ಮುರ್ಮು ಪದಗ್ರಹಣ ಹಿನ್ನೆಲೆಯಲ್ಲಿ ಸ್ವಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

13 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago