Featured

ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ : ಡಿ .ಕೆ ಶಿವಕುಮಾರ್ -Vishwanews24

ಮುಂಬೈ: ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ ಎಂದು ಜಲಸಂಪನ್ಮೂಲ ಸಚಿವ ಡಿ .ಕೆ ಶಿವಕುಮಾರ್ ಹೇಳಿದ್ದಾರೆ.

ಅತೃಪ್ತ ಶಾಸಕರನ್ನು ಭೇಟಿಯಾಗದೇ ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯಲ್ಲ ಎಂದು ಹಠ ಹಿಡಿದಿರುವ ಡಿಕೆಶಿ, ಬೆಳಗ್ಗಿನಿಂದಲೂ ಹೋಟೆಲ್ ಮುಂಭಾಗದಿಂದ ಕದಲಿಲ್ಲ. ಹೋಟೆಲ್ ಒಳಗಡೆ ಬಿಡುವವರೆಗೂ ನಾನು ಇಡೀ ದಿನ ಇಲ್ಲೇ ಕಾಯ್ತೀನಿ ಎಂದು ಹೇಳಿದ್ದಾರೆ.

ಮುಂಬೈ ಬಿಟ್ಟು ಹೋಗಲ್ಲ, ನನ್ನನ್ನ ಬೇಕಾದರೆ ಬಂಧಿಸಲಿ ಎಂದಿದ್ದಾರೆ. ಜೊತೆಯಲ್ಲಿ ಸಚಿವ ಜಿ.ಟಿ. ದೇವೇಗೌಡ ಸೇರಿದಂತೆ ಜೆಡಿಎಸ್ ಶಾಸಕರು ಭಾಗಿಯಾಗಿದ್ದಾರೆ. ಇನ್ನೂ ಸ್ಥಳಕ್ಕೆ ಮುಂಬೈ ಕಾಂಗ್ರೆಸ್ ಮುಖಂಡರ ಆಗಮಿಸಿದ್ದಾರೆ. ಡಿಸಿಪಿ ಸಂಗ್ರಾಮಸಿಂಗ್ ಎಷ್ಟೇ ಮನವೊಲಿಸಿದರು ಪಟ್ಟು ಬಿಡದೆ ಡಿ. ಕೆ. ಶಿವಕುಮಾರ್ ಹೊಟೆಲ್ ಮುಂದೆಯೇ ನಿಂತಿದ್ದಾರೆ.

ಹೋಟೆಲ್ ಒಳಗಡೆ ಹೋಗಲು ಪೊಲೀಸರು ನಿರಾಕರಿಸುತ್ತಿದ್ದಂತೆಯೇ ಡಿಕೆಶಿ ಹಾಗೂ ಪೊಲೀಸರ ಮಧ್ಯೆ ಮಾತುಕತೆ ನಡೆದಿದೆ. ನಾವು ಒಂದೇ ಕುಟುಂಬದವರು. ನಮ್ಮ ಮಧ್ಯೆ ಸ್ವಲ್ಪ ಸಮಸ್ಯೆ ಆಗಿದೆ. ಅದನ್ನು ನಾವು ಸರಿಪಡಿಸಲು ಬಂದಿದ್ದೇವೆಯೋ ಹೊರತು, ಬೆದರಿಕೆ ಹಾಕಲು ಬಂದಿಲ್ಲ. ನಿನ್ನೆ ಬಿಜೆಪಿಯವರನ್ನು ಬಿಟ್ಟಿದ್ದೀರಿ, ಆದರೆ ಇವತ್ತು ನಮ್ಮವರನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸುವ ಮೂಲಕ ಸಚಿವರು ಮನವಿ ಮಾಡಿಕೊಂಡರೂ ಪೊಲೀಸರು  ಒಪ್ಪಿಲ್ಲ. ಹೀಗಾಗಿ ಇಬ್ಬರು ಮುಖಂಡರೊಂದಿಗೆ ಡಿಕೆಶಿ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ.

ಒಂದೆಡೆ ಅತೃಪ್ತರು ಡಿಕೆಶಿ ಭೇಟಿಗೆ ನಿರಾಕರಿಸಿದರೆ ಇತ್ತ ಸಚಿವರು ನಾನು ಶಾಸಕರನ್ನು ಭೇಟಿ ಮಾಡಿಯೇ ಬೆಂಗಳೂರಿಗೆ ವಾಪಸ್ಸಾಗುವುದು ಎಂಬ ಹಠಕ್ಕೆ ಬೀಳುವ ಮೂಲಕ ಮುಂಬೈನಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago