Featured

ಏನು ವೈಭವ ಮಾಡಿಕೊಳ್ಳಲಿ ಎಷ್ಟೇ ಜನ ಕರೆಸಲಿ ಏನೇ ಮಾಡಿದ್ರು ಜನ ಬಿಜೆಪಿಯನ್ನು ಕಿತ್ತೊಗೆಯಬೇಕು ಅಂತ ಸಂಕಲ್ಪ ಮಾಡಿದ್ದಾರೆ : ಡಿಕೆ ಶಿ

ಒಂದು ಭ್ರಷ್ಟ ಆಡಳಿತವನ್ನು ಸ್ವಚ್ಛ ಮಾಡಬೇಕು ಆದರೆ ಪ್ರಧಾನಿ ತಮ್ಮ ಹಾಗೂ ಪಕ್ಷದ ವೈಭವಕ್ಕೆ ಎಲ್ಲವನ್ನು ಮಾಡಿಕೊಳ್ಳುತ್ತಿದ್ದಾರೆ ..

ಏರ್ ಪೋರ್ಟ್ ನವರೇ ಪ್ರತಿಮೆ ನಿರ್ಮಾಣ ಮಾಡ್ತಾ ಇದ್ರು, 50- 60 ಕೋಟಿ ಹಣ ಖರ್ಚು ಮಾಡುವುದು ಏರ್ ಪೋರ್ಟ್ ನವರಿಗೆ ದೊಡ್ಡ ವಿಚಾರ ಅಲ್ಲ..

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಾಗೂ ಪಕ್ಷದ ವೈಭವಕ್ಕೆ ಎಲ್ಲವನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವಿಚಾರವಾಗಿ ಶುಕ್ರವಾರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪ್ರಗತಿ ಪ್ರತಿಮೆ ಅನಾವರಣ ಹಾಗೂ ಮೋದಿ ಕಾರ್ಯಕ್ರಮ, ಕಾಮಗಾರಿ, ವ್ಯವಸ್ಥೆಗೆ 48.44 ಕೋಟಿ ವೆಚ್ಚ ಮಾಡಿರುವ ಕುರಿತಾದ ಪ್ರಶ್ನೆಗೆ ಈ ರೀತಿಯಲ್ಲಿ ಉತ್ತರ ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಬರೆದ ಪತ್ರಕ್ಕೆ ಪ್ರಧಾನಿ ಮೋದಿ ಉತ್ತರ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಇನ್ನೊಬ್ಬರು ಲಂಚದಿಂದ ಸಮಸ್ಯೆ ಆಗುತ್ತಿದೆ ಎಂದು ದಯಾ ಮರಣಕ್ಕೆ ಪತ್ರ ಬರೆದಿದ್ದಾರೆ. ಒಂದು ಭ್ರಷ್ಟ ಆಡಳಿತವನ್ನು ಸ್ವಚ್ಛ ಮಾಡಬೇಕು. ಆದರೆ ಮೋದಿ ತಮ್ಮ ವೈಭವಕ್ಕೆ, ಪಕ್ಷದ ವೈಭವಕ್ಕೆ ಎಲ್ಲವನ್ನೂ ಮಾಡಿಕೊಳ್ತಿದ್ದಾರೆ. ನಮ್ಮ ಪತ್ರಕ್ಕೆ ಉತ್ತರ ಬಂದಿಲ್ಲ ಅಂದ್ರೆ ಮುಂದೆ ಏನು ಮಾಡಬೇಕೋ ಮಾಡ್ತೇವೆ ಎಂದರು.

ಮಲ್ಪೆ: ಬೀಚ್‌ ಅಭಿವೃದ್ಧಿ ಸಮಿತಿಯಿಂದ ಹಿಂದೂ ರುದ್ರಭೂಮಿಯಲ್ಲಿ ಕಡು ಬಡವರಿಗೆ ಯಾವುದೇ ಶುಲ್ಕ ಸ್ವೀಕರಿಸುವುದಿಲ್ಲ..

ಗುಂಡಿ ಹೇಗೆ ಮುಚ್ಚುತ್ತಿದ್ದಾರೋ, ಭ್ರಷ್ಟಾಚಾರದ ವಿಚಾರಕ್ಕೆ ಏನು ಸಂದೇಶ ಕೊಟ್ಟು ಹೋಗ್ತಾರೆ ನೋಡ್ತೇವೆ. ಮುಂದಿನ ಹೋರಾಟದ ಬಗ್ಗೆ ಈಗಲೇ ಹೇಳಲ್ಲ. ಐದು ನಿಮಿಷಕ್ಕೆ ಊಟ ರೆಡಿ ಆಗತ್ತಾ? ಮಸಾಲೆ ರೆಡಿ ಮಾಡಬೇಕು ಕಟ್ಟಿಗೆ ರೆಡಿ ಮಾಡಬೇಕು ಎಂದರು.

ಪ್ರತಿಮೆ ನಿರ್ಮಾಣ ಏರ್ ಪೋರ್ಟ್ ಅಥಾರಿಟಿಯಿಂದ ಆಗಬೇಕಿತ್ತು ಎಂಬ ವಿಚಾರವಾಗಿ ಮಾತನಾಡಿ, ನಾನು ಮೊದಲೇ ಹೇಳಿದ್ದೆ, ಈಗ ಹೇಳ್ತಿರೋದಲ್ಲ. ಬೇಕಿದ್ರೆ ನನ್ನ ಬೈಟ್ ಪಾಯಿಂಟ್ಸ್ ತೆಗೆದು ನೋಡಲಿ. ಏರ್ ಪೋರ್ಟ್ ನವರೇ ಮಾಡ್ತಾ ಇದ್ರು, 50- 60 ಕೋಟಿ ಹಣ ಖರ್ಚು ಮಾಡುವುದು ಏರ್ ಪೋರ್ಟ್ ನವರಿಗೆ ದೊಡ್ಡ ವಿಚಾರ ಅಲ್ಲ. ಬಿಜೆಪಿಯವರು ಏನೇನೋ ಲೆಕ್ಕಾಚಾರ ಹಾಕಿಕೊಂಡು ಮಾಡ್ತಿದ್ದಾರೆ. ಏರ್ ಪೋರ್ಟ್ ಆವರಣ, ಅವರೇ ಮಾಡಬೇಕಿತ್ತು, ಇದು ಬೇಸಿಕ್ ಕಾಮನ್ ಸೆನ್ಸ್ ಎಂದರು.

ಮಂಗಳೂರು Airport : 2.01 ಕೋ.ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ.. ನಾಲ್ಕು ಮಂದಿ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ :- Vishwanews24

ಸರ್ಕಾರದ ದುಡ್ಡನ್ನು ಹೇಗೆ ಉಳಿಸಬೇಕು ಬಳಸಬೇಕು ಅನ್ನೋದು ಬೇಸಿಕ್ ಕಾಮನ್ ಸೆನ್ಸ್. ಇವರು ಏನೋ ದೊಡ್ಡ ಹೆಸರು ಮಾಡಿಕೊಳ್ಳಬೇಕು ಅಂತ ಬಹಳ ಅರ್ಜೆಂಟ್ ನಲ್ಲಿದ್ದಾರೆ. ಪ್ರಧಾನಿ ಮೋದಿ ತಮ್ಮ ವೈಭವ ಹಾಗೂ ಪಾರ್ಟಿ ವೈಭವ ಅದಕ್ಕಾಗಿ ಎಷ್ಟು ಖರ್ಚಾಗ್ತಿದೆ ಅನ್ನೋದಕ್ಕೆ ನಿಮ್ಮ ಬಳಿಯೇ ಮಾಹಿತಿ ಇದೆ. ಏನು ವೈಭವ ಮಾಡಿಕೊಳ್ಳಲಿ ಎಷ್ಟೇ ಜನ ಕರೆಸಲಿ ಏನೇ ಮಾಡಿದ್ರು ಜನ ಇವರನ್ನು ಕಿತ್ತೊಗೆಯಬೇಕು ಅಂತ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago