ಏನೇ ಅಡಚಣೆ ಬಂದರು ತುಳುನಾಡಿನ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ : ಮಿಥುನ್ ರೈ – Vishwanews24

ನನ್ನ ಹೇಳಿಕೆಯು ‌ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಿದ್ದು ಹೊರತು ನನ್ನ ವೈಯಕ್ತಿಕ ಹೇಳಿಕೆಯಲ್ಲ..

ಬಿಜೆಪಿಯವರು ಸೃಷ್ಟಿಸಿದ ಇಂತಹ ವಿವಾದ ಕೇವಲ ರಾಜಕೀಯ ಗಿಮಿಕ್..

ನಮ್ಮ ಗೌರವಾನ್ವಿತ ಶ್ರೀಗಳು ನಮಗೆ ಕಲಿಸಿದಂತೆಯೇ ನಾನು ಕೋಮು ಸೌಹಾರ್ದತೆಯನ್ನು ಬೋಧಿಸುತ್ತೇನೆ..

ರಕ್ಷಿತ್‌ ಶೆಟ್ಟಿ ಹೇಳಿಕೆಗೆ  ಮಿಥುನ್ ರೈ ಸ್ಪಷ್ಟನೆ

ಮಂಗಳೂರು: ಉಡುಪಿ ಕೃಷ್ಣ ಮಠದ ಭೂಮಿಗೆ ಸಂಬಂಧಿಸಿದ ಅಭಿಪ್ರಾಯಗಳು ಮತ್ತು ವಿವಾದದ ಕುರಿತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಮಿಥುನ್ ರೈ ಇಂದು ಹೇಳಿಕೆ ಬಿಡುಗಡೆ ಮಾಡಿದ್ದು, ‘ನನ್ನ ಹೇಳಿಕೆಯು ‌ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಉಡುಪಿ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜರು’ ಎಂದು ಮಿಥುನ್ ರೈ ಮೂಡುಬಿದಿರೆಯ ಪುತ್ತಿಗೆ ಮಸೀದಿಯೊಂದರ ಸಮಾರಂಭದಲ್ಲಿ ಹೇಳಿದ್ದರು. ಇದಕ್ಕೆ ಟ್ವಿಟರ್‌ನಲ್ಲಿ ಟೀಕೆ ಮಾಡಿದ್ದ ರಕ್ಷಿತ್‌ ಶೆಟ್ಟಿ, ‘ದೇವಾಲಯಗಳ ನಗರಿ ಉಡುಪಿಗೆ ಸಾವಿರಕ್ಕೂ ಹೆಚ್ಚು ವರ್ಷದ ಬರೆದಿಟ್ಟಿರುವ ಇತಿಹಾಸ ಇದೆ. ನಿಮಗೆ ಈ ಬಗ್ಗೆ ಗೊತ್ತಿರದಿದ್ದರೇ ಏಕೆ ಸಾರ್ವಜನಿಕ ಸಮಾರಂಭಗಳಲ್ಲಿ ನಿಮ್ಮ ಅಜ್ಞಾನ ಪ್ರದರ್ಶಿಸುತ್ತೀರಿ?’ ಎಂದು ಕಿಡಿಕಾರಿದ್ದರು.

ವಿಚಾರವು ವಿವಾದದ ರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮಿಥುನ್‌ ರೈ ಭಾನುವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ನಾನು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಷ್ಠಾವಂತ ಅನುಯಾಯಿ ಹಾಗೂ ಅವರ ಬೋಧನೆಗಳು ಮತ್ತು ಕೋಮು ಸೌಹಾರ್ದ ಸಿದ್ಧಾಂತಗಳನ್ನು ನನ್ನ ಕೊನೆಯ ಉಸಿರು ಇರುವವರೆಗೂ ಪಾಲಿಸುತ್ತೇನೆ.

ನಾನು ಏನೇ ಮಾತನಾಡಿದರೂ ಅದು ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ ಏಕೆಂದರೆ ನಾನು ಇತಿಹಾಸಕಾರನಲ್ಲ.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿವೆ. ಇಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕೆ, ಬಿಜೆಪಿಯವರು ಸೃಷ್ಟಿಸಿದ ಇಂತಹ ವಿವಾದಗಳು ಕೇವಲ ರಾಜಕೀಯ ಗಿಮಿಕ್ ಆಗಿದೆ ಎಂಬುವುದು ಸ್ಪಷ್ಟವಾಗಿ ಕಾಣುತ್ತಿದ್ದೆ.

ರಕ್ಷಿತ್ ಶೆಟ್ಟಿ ಅವರ ಮಾತಿನಲ್ಲಿ ಸರಿ ಇರಬಹುದು, ಆದರೆ ನನ್ನ ದೃಷ್ಟಿಕೋನದಿಂದ ನಾನು ಕೂಡ ಸರಿ. ನಮ್ಮ ಗೌರವಾನ್ವಿತ ಶ್ರೀಗಳು ನಮಗೆ ಕಲಿಸಿದಂತೆಯೇ ನಾನು ಕೋಮು ಸೌಹಾರ್ದತೆಯನ್ನು ಬೋಧಿಸುತ್ತೇನೆ, ಏಕೆಂದರೆ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಅದರ ಅವಶ್ಯಕತೆಯಿದೆ.

ನನ್ನ ಎಲ್ಲಾ ಅನುಯಾಯಿಗಳು ಈ ಗೊಂದಲ ಮತ್ತು ಸೃಷ್ಟಿಯಾದ ವಿವಾದವನ್ನು ಕೊನೆಗಾಣಿಸಬೇಕೆಂದು ನಾನು ತಮ್ಮಲ್ಲಿ ವಿನಂತಿಸುತ್ತೇನೆ. ಹಾಗೂ ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್ ಶೆಟ್ಟಿ ಅವರನ್ನು ಟಾರ್ಗೆಟ್ ಮಾಡಬೇಡಿ, ಅವರು ನಮ್ಮ ತುಳುನಾಡಿನ ಹೆಮ್ಮೆ.

ಏನೇ ಅಡಚಣೆ ಬಂದರು ಸಹ ತುಳುನಾಡಿನ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ಮಿಥುನ್‌ ರೈ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago