ಬೆಂಗಳೂರು: ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತದ ವಿಚಾರವಾಗಿ ಬಿಜೆಪಿ (BJP) ಹೋರಾಟ ಮಾಡಿರೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಕೂಡ ಹೆಗಲು ಮೇಲೆ ಹೊರೋಣ. ನೋಡೋಣ ಏನಾಗುತ್ತೆ. ಹೆಣದ ಮೇಲೆ ರಾಜಕೀಯ ಬಿಟ್ಟು, ಅವ್ರೇನು ಮಾಡಿದ್ದಾರೆ? ಯಾವ ಸಾಮಾಜಿಕ ಕಾರ್ಯಕರ್ತರು ಸಹಕಾರ ನೀಡೋದಿಲ್ಲ. ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನ ತೆಗೆದುಕೊಳ್ಳುತ್ತದೆ ಎಂದು ಉತ್ತರಿಸಿದ್ದಾರೆ.
ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ನಾವು ಅನೇಕ ಪ್ರಕರಣಗಳನ್ನು ಕೇಳುತ್ತೇವೆ. ಗಂಗಾಧರ ಪ್ರಕರಣದ ಬಗ್ಗೆ ನಾವು ಕೇಳುತ್ತೇವೆ. ನಾನು ಅಹಮದಾಬಾದ್‌ಗೆ ಹೋಗಿದ್ದೆ. ನಾನು ಕೇಂದ್ರ ಸರ್ಕಾರವನ್ನ ಯಾವತ್ತೂ ದೂಷಿಸಿಲ್ಲ. ದೇವಾಲಯದಲ್ಲಿ ಕಾಲ್ತುಳಿತ ಆಗಿದೆ. ಅನೇಕ ಕಡೆ ಕಾಲ್ತುಳಿತ ಆಗಿದೆ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ಮಂಗಳವಾರ ವಿಧಾನಸೌಧದಲ್ಲಿ ಪರಿಸರ ನಡಿಗೆ ಕಾರ್ಯಕ್ರಮವನ್ನ ಸರ್ಕಾರ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಬಹಳ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ನೀವೆಲ್ಲರೂ ನಮ್ಮ ದೇಶವನ್ನು ರಕ್ಷಣೆ ಮಾಡಲು ಬಂದಿದ್ದೀರಿ. ನಮ್ಮ ಮಕ್ಕಳು ದೊಡ್ಡ ಮಟ್ಟಕ್ಕೆ ಬೆಳೆಯಬೇಕು. ನಾವು ನಿಮ್ಮೆಲ್ಲರಿಗೂ ವಿಧಾನಸೌಧ ಪ್ರವೇಶಕ್ಕೆ ಅವಕಾಶ ಕೊಟ್ಟಿದ್ದೇವೆ. ವಿಧಾನಸೌಧಕ್ಕೆ ಭೇಟಿ ನೀಡಿ ಎಂದಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…