ಬೆಂಗಳೂರು : ಏಪ್ರಿಲ್ 1 ರಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯದ 12 ರಿಂದ 14 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿಯೇ ಕೊರೊನಾ ಲಸಿಕೆ ಕೋರ್ಬಿವ್ಯಾಕ್ಸ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.
12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್ 16 ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದ್ದು, ಸದ್ಯ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತಿದೆ.
ರಾಜ್ಯದಲ್ಲಿ 12 ರಿಂದ 14 ವರ್ಷ ವಯಸ್ಸಿನ 20.5 ಲಕ್ಷ ಮಕ್ಕಳಿದ್ದು, ಈವರೆಗೆ 5.3 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದೆ.
ಇನ್ನು ಉಳಿದ ಮಕ್ಕಳಿಗೆ ಲಸಿಕೆ ನೀಡಲು ಲಸಿಕಾ ಅಭಿಯಾನ ಹಮ್ಮಿಕೊಳ್ಳಲು ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ ಕೈಗೊಂಡಿದ್ದು, 2010 ರ ಮಾರ್ಚ್ 28 ಅಥವಾ ಅದಕ್ಕೂ ಮುನ್ನ ಜನಿಸಿರುವ 12 ರಿಂದ 14 ವರ್ಷದ ಮಕ್ಕಳು ಕೋರ್ಬಿವ್ಯಾಕ್ಸ್ ಲಸಿಕೆಗೆ ಅರ್ಹರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…