ನವದೆಹಲಿ: ಇದೇ ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ.
ದೇಶದಲ್ಲಿ ಕೋವಿಡ್-19 ಎಕ್ಸ್ ಇ ನೂತನ ರೂಪಾಂತರ ಸೋಂಕಿನ ಮಾತು ಕೇಳಿಬರುತ್ತಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಕೋವಿಡ್-19 ವಿರುದ್ಧ ಮುನ್ನೆಚ್ಚರಿಕಾ ಬೂಸ್ಟರ್ ಡೋಸ್ ನೀಡಿಕೆಗೆ ಮುಂದಾಗಿದೆ. 18 ವರ್ಷ ಮೇಲ್ಪಟ್ಟ ಜನಸಂಖ್ಯೆಯ ಗುಂಪಿಗೆ ಏಪ್ರಿಲ್ 10 ರಿಂದ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಮುನ್ನೆಚ್ಚರಿಕೆಯ ಡೋಸ್‌ಗಳನ್ನು ಪ್ರಪಂಚದಾದ್ಯಂತ ಬೂಸ್ಟರ್ ಡೋಸ್ ಎಂದು ಕರೆಯಲಾಗುತ್ತದೆ.ಈ ಹಿಂದೆ ವೈದ್ಯಕೀಯ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ನೀಡಲಾಗಿತ್ತು. ಇದೀಗ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು, ಆ ಮೂಲಕ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೂಸ್ಟರ್ ಕೋವಿಡ್ ಲಸಿಕೆಯನ್ನು ನೀಡದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ.
ಈ ಹಿಂದೆ ಕೇಂದ್ರ ಸರ್ಕಾರ ಮುಂಚೂಣಿಯ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ವಯಸ್ಸಿನ ಹೊರತಾಗಿಯೂ ಬೂಸ್ಟರ್ ಡೋಸ್‌ಗಳನ್ನು ಅನುಮತಿಸಿತ್ತು.
WHO ಮತ್ತು ಪ್ರಪಂಚದಾದ್ಯಂತದ ವೈರಾಲಜಿಸ್ಟ್‌ಗಳು ಸಾವುಗಳು ಮತ್ತು ಕೋವಿಡ್-ಸಂಬಂಧಿತ ಆರೋಗ್ಯ ತೊಡಕುಗಳನ್ನು ಕಡಿಮೆ ಮಾಡಲು ಬೂಸ್ಟರ್ ಡೋಸ್‌ಗಳನ್ನು ಶಿಫಾರಸು ಮಾಡಿದ್ದಾರೆ. ಅದಕ್ಕೆ ಪೂರಕವಾಗಿ ಈಗಾಗಲೇ ಹಲವಾರು ದೇಶಗಳು ವಾಸ್ತವವಾಗಿ ನಾಲ್ಕನೇ ಡೋಸ್ ಕೋವಿಡ್ ಲಸಿಕೆಯನ್ನು ನೀಡಲು ಪ್ರಾರಂಭಿಸಿವೆ. ಈ ಬೂಸ್ಟರ್ ಡೋಸ್ ಗಳು ಸಾಮಾನ್ಯವಾಗಿ ನಾಲ್ಕರಿಂದ ಆರು ತಿಂಗಳವರೆಗೆ ಪರಿಣಾಮಕಾರಿಯಾಗಿರುತ್ತವೆ. ಇದು ಕೋವಿಡ್ ಸೋಂಕಿನ ವಿರುದ್ಧ ಮೇಲುಗೈ ಸಾಧಿಸಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…