Featured

ಏಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ : ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ – vishwanews24

ಏಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ : ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎಪ್ರಿಲ್ 10 ರಿಂದ ಪ್ರಾರಂಭಗೊಳ್ಳಲಿದೆ. 10 ದಿನಗಳ ಕಾಲ ನಡೆಯಲಿರುವ ಈ ಜಾತ್ರೆಯಲ್ಲಿ ಈ ಹಿಂದೆಯಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಈ ಹಿಂದೆ ಮಾಡಿದ ಮನವಿಯಂತೆ ಈ ಬಾರಿಯೂ ಇದೇ ವ್ಯವಸ್ಥೆಯನ್ನು ಮುಂದುವರಿಸಲು ಕ್ಷೇತ್ರದ ವ್ಯವಸ್ಥಾಪನ ಸಮಿತಿ ನಿರ್ಧರಿಸಿದೆ.

ಎಪ್ರಿಲ್ 10 ರಿಂದ 20 ರ ತನಕ ಈ ಜಾತ್ರೆ ನಡೆಯಲಿದ್ದು, ಈ ಬಾರಿಯೂ ಅನ್ಯಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲು ನಿರ್ಧರಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎನ್ನುವ ಮನವಿ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ಆ ಸಂದರ್ಭದಲ್ಲಿ ಕಾಂಗ್ರೇಸ್ ವಿರೋಧಿಸಿತ್ತು. ಹಿಂದೂಪರ ಸಂಘಟನೆಗಳ ಈ ಮನವಿಗೆ ಸ್ಪಂದಿಸಬಾರದು ಎನ್ನುವ ಒತ್ತಾಯಗಳ ನಡುವೆಯೇ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅನ್ಯಮತೀಯರ ವ್ಯಾಪಾರದ ನಿಶೇಧವನ್ನು ಈ ಬಾರಿಯೂ ಮುಂದುವರಿಸಿದ್ದಾರೆ.

ಈ ಜಾತ್ರೆಯ ದಿನಗಳಲ್ಲಿ ಕ್ಷೇತ್ರದಲ್ಲಿ ಅತೀ ಹೆಚ್ಚು ಜನ ಸೇರುವ ಕಾರಣಕ್ಕೆ ಅತೀ ಹೆಚ್ಚಿನ ವ್ಯಾಪಾರ-ವ್ಯವಹಾರದ ಕೇಂದ್ರವಾಗಿಯೂ ಬದಲಾಗುತ್ತದೆ. ಏಲಂ ಪ್ರಕ್ರಿಯೆಯ ಮೂಲಕ ಅಂಗಡಿಗಳ ಏಲಂ ಪ್ರಕ್ರಿಯೆಗಳು ಇಲ್ಲಿ ನಡೆಯುತ್ತಿದ್ದು, ಈ ಬಾರಿ ಏಲಂ ಪ್ರಕ್ರಿಯೆಯಲ್ಲೂ ಹಲವು ಮಾರ್ಪಾಡುಗಳನ್ನು ತರಲು ಉದ್ಧೇಶಿಸಲಾಗಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಈ ನಿರ್ಧಾರವನ್ನು ಹಿಂದೂಪರ ಸಂಘಟನೆಗಳು ಸ್ಚಾಗತಿಸಿವೆ. ಆದರೆ ವ್ಯವಸ್ಥಾಪನಾ ಸಮಿತಿ ಮತ್ತು ಶಾಸಕರ ಈ ನಡೆಗೆ ಅಸಮಾಧಾನವೂ ಕೇಳಿಬರಲಾರಂಭಿಸಿದೆ

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

4 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

7 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

11 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

11 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

12 hours ago