ಶ್ರೀನಗರ: ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆ ಅಮರನಾಥ ಯಾತ್ರೆಯನ್ನು ರದ್ದು ಮಾಡಲಾಗಿತ್ತು. ಆದರೆ ಮತ್ತೆ ಇದಕ್ಕೆ ಚಾಲನೆ ನೀಡಲಾಗಿದೆ. ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ಭಕ್ತಾದಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಅಮರನಾಥಜೀ ಪುಣ್ಯ ಕ್ಷೇತ್ರದ ಸಿಇಓ ನಿತೀಶ್ವರ್ ಕುಮಾರ್ ಹೇಳಿದ್ದಾರೆ.
ಜೂನ್ 30 ರಿಂದ ಆಗಸ್ಟ್ 11ರ ವರೆಗೂ ಯಾತ್ರೆ ನಡೆಸಲು ತೀರ್ಮಾನಿಸಲಾಗಿದ್ದು, ಯಾತ್ರೆ ಕೈಗೊಳ್ಳುವ ಭಕ್ತಾದಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಶ್ರೈನ್ ಬೋರ್ಡ್‍ನ ವೆಬ್‍ಸೈಟ್ ಅಥವಾ ಮೂಬೈಲ್ ಅಪ್ಲಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೊರೊನಾದಿಂದಾಗಿ ಕಳೆದ ಎರಡು ವರ್ಷದಿಂದ ಯಾತ್ರೆ ರದ್ದಾಗಿದ್ದು, ಈ ವರ್ಷ ಮೂರು ಲಕ್ಷ ಜನರು ಯಾತ್ರೆ ಮಾಡುವ ನಿರೀಕ್ಷೆಗಳಿದೆ. ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ 3,000 ಜನರು ಉಳಿದುಕೊಳ್ಳಲು ವ್ಯವಸ್ಥೆ ಇರುವ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗಿದೆ. ಅಲ್ಲಿ ಭಕ್ತಾಧಿಗಳು ತಂಗಲು ಅವಕಾಶ ಮಾಡಿಕೊಡಲಾಗಿದೆ.
2019 ಆಗಸ್ಟ್ 5 ರಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಮೊದಲ ಬಾರಿ ಯಾತ್ರೆಯನ್ನು ಭದ್ರತೆಯ ಕಾರಣದಿಂದ ರದ್ದು ಮಾಡಲಾಗಿತ್ತು. ಇದಾದ ಬಳಿಕ ಎರಡು ವರ್ಷ ಕೊರೊನಾ ಕಾರಣಗಳಿಂದ ರದ್ದು ಮಾಡಲಾಗಿತ್ತು. ಕಳೆದ ಮೂರು ವರ್ಷಗಳಿಂದ ಅಮರನಾಥ ಯಾತ್ರೆ ನಡೆದಿರಲಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…