Featured

ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ನೋಂದಣಿ ಆರಂಭ – Vishwanews24

ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ನೋಂದಣಿ ಆರಂಭ – Vishwanews24

ಶ್ರೀನಗರ: ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆ ಅಮರನಾಥ ಯಾತ್ರೆಯನ್ನು ರದ್ದು ಮಾಡಲಾಗಿತ್ತು. ಆದರೆ ಮತ್ತೆ ಇದಕ್ಕೆ ಚಾಲನೆ ನೀಡಲಾಗಿದೆ. ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ಭಕ್ತಾದಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಅಮರನಾಥಜೀ ಪುಣ್ಯ ಕ್ಷೇತ್ರದ ಸಿಇಓ ನಿತೀಶ್ವರ್ ಕುಮಾರ್ ಹೇಳಿದ್ದಾರೆ.

ಜೂನ್ 30 ರಿಂದ ಆಗಸ್ಟ್ 11ರ ವರೆಗೂ ಯಾತ್ರೆ ನಡೆಸಲು ತೀರ್ಮಾನಿಸಲಾಗಿದ್ದು, ಯಾತ್ರೆ ಕೈಗೊಳ್ಳುವ ಭಕ್ತಾದಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಶ್ರೈನ್ ಬೋರ್ಡ್‍ನ ವೆಬ್‍ಸೈಟ್ ಅಥವಾ ಮೂಬೈಲ್ ಅಪ್ಲಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊರೊನಾದಿಂದಾಗಿ ಕಳೆದ ಎರಡು ವರ್ಷದಿಂದ ಯಾತ್ರೆ ರದ್ದಾಗಿದ್ದು, ಈ ವರ್ಷ ಮೂರು ಲಕ್ಷ ಜನರು ಯಾತ್ರೆ ಮಾಡುವ ನಿರೀಕ್ಷೆಗಳಿದೆ. ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ 3,000 ಜನರು ಉಳಿದುಕೊಳ್ಳಲು ವ್ಯವಸ್ಥೆ ಇರುವ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗಿದೆ. ಅಲ್ಲಿ ಭಕ್ತಾಧಿಗಳು ತಂಗಲು ಅವಕಾಶ ಮಾಡಿಕೊಡಲಾಗಿದೆ.

2019 ಆಗಸ್ಟ್ 5 ರಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಮೊದಲ ಬಾರಿ ಯಾತ್ರೆಯನ್ನು ಭದ್ರತೆಯ ಕಾರಣದಿಂದ ರದ್ದು ಮಾಡಲಾಗಿತ್ತು. ಇದಾದ ಬಳಿಕ ಎರಡು ವರ್ಷ ಕೊರೊನಾ ಕಾರಣಗಳಿಂದ ರದ್ದು ಮಾಡಲಾಗಿತ್ತು. ಕಳೆದ ಮೂರು ವರ್ಷಗಳಿಂದ ಅಮರನಾಥ ಯಾತ್ರೆ ನಡೆದಿರಲಿಲ್ಲ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

13 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

14 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago