ಮಂಡ್ಯ, : ಕರ್ನಾಟಕ ವಿಧಾನಸಭಾ ಚುನಾವಣೆ ಕಣರಂಗೇರುತ್ತಿದ್ದಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಅವರು ಏಪ್ರಿಲ್ 16ಕ್ಕೆ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಡ್ಯದಲ್ಲಿ ಈಗಾಗಲೇ ಟಿಕೆಟ್ ಪಡೆದು ಪ್ರಚಾರ ಆರಂಭಿಸಿರುವ ಎಂ ಶ್ರೀನಿವಾಸ್ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮೊದಲಿನಿಂದಲೂ ಜೆಡಿಎಸ್ ಪ್ರಾಬಲ್ಯವಿದೆ. ಎಚ್‌ಡಿ ದೇವೇಗೌಡ, ಎಚ್‌ಡಿ ಕುಮಾರಸ್ವಾಮಿ ಹಾಗೂ ಹಾಲಿ ಶಾಸಕ ಎಂ ಶ್ರೀನಿವಾಸ್ ಅವರ ಬೆಂಬಲಿಗರು ಕಾರ್ಯಕರ್ತರ ಬಹುದೊಡ್ಡ ಪಡೆ ಇದೆ.
ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ಚುನಾವಣಾ ರಂಗ ಜೋರಾಗಿದೆ. ಎಲ್ಲ ಪಕ್ಷಗಳಿಂದಲೂ ಪ್ರಚಾರವೂ ನಡೆಯುತ್ತಿದೆ. ಜೆಡಿಎಸ್‌ನಿಂದ ಈಗಾಗಲೇ ಟಿಕೆಟ್ ಪಡೆದಿರುವ ಎಂ.ಶ್ರೀನಿವಾಸ್ ಅವರು ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದಿದ್ದು, ಏಪ್ರಿಲ್ 16ಕ್ಕೆ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಅವರದು ರೈತಾಪಿ ಕುಟುಂಬ. ಹನಕೆರೆಯಲ್ಲಿಯೇ ಪ್ರಾಥಮಿಕ ಹಾಗೂ ಮಾಧ್ಯಮಿಕ ವಿದ್ಯಾಭ್ಯಾಸ ಮುಗಿಸಿದರು. ಪ್ರೌಢಶಾಲಾ ಶಿಕ್ಷಣವನ್ನು ಮಂಡ್ಯದ ಸರ್ಕಾರಿ ಪ್ರೌಢಶಾಲೆಯಲ್ಲೂ (ಕಲ್ಲುಕಟ್ಟಡ), ಬಿಎಸ್ಸಿ ಪದವಿಯನ್ನು ಮೈಸೂರಿನ ಎಂಡಿಟಿಡಿಬಿ ಕಾಲೇಜಿನಲ್ಲಿ ಮುಗಿಸಿದರು. ಕಾನೂನು ಪದವಿಯನ್ನು ಮಂಡ್ಯದ ಹೊಂಬೇಗೌಡ ಕಾನೂನು ಕಾಲೇಜಿನಲ್ಲಿ ಪಡೆದು ವಕೀಲಿ ವೃತ್ತಿಯನ್ನು ಮಂಡ್ಯದಲ್ಲಿಯೇ ಪ್ರಾರಂಭಿಸಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…