ನವದೆಹಲಿ : ಬಿಜೆಪಿ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಅವರು ಏಪ್ರಿಲ್ 6 ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಶಕ್ತಿಕಾಂತ್ ಗೋಹಿಲ್ ಟ್ವೀಟ್ ಮಾಡಿದ್ದಾರೆ.
ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಶತ್ರುಘ್ನ ಸಿನ್ಹಾ, ವಯಸ್ಸಿನಲ್ಲಿ ನನಗಿಂತ ಕಿರಿಯರಾದರೂ ರಾಹುಲ್ ಗಾಂಧಿ, ದೇಶದ ಜನಪ್ರಿಯ ನಾಯಕ,
ರಾಹುಲ್ ಗಾಂಧಿ ನಾಯಕತ್ವವನ್ನು ಬಗ್ಗೆ ಮಾತನಾಡಿದ ಅವರು ರಾಹುಲ್ ಗಾಂಧಿ ಸಾಕಷ್ಟು ಧನಾತ್ಮಕ ಗುಣಗಳನ್ನು ಹೊಂದಿದ್ದಾರೆ. ಪ್ರತಿಯೊಬ್ಬರನ್ನೂ ಪ್ರೋತ್ಸಾಹಿಸುತ್ತಾರೆ. ವಯಸ್ಸಿನಲ್ಲಿ ನನಗಿಂತ ಕಿರಿಯನಾದರೂ, ಇಂದು ಆತ ದೇಶದ ಜನಪ್ರಿಯ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ. ನಾನು ನೆಹರು-ಗಾಂಧಿ ಕುಟುಂಬದ ಬೆಂಬಲಿಗ. ಈಗ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅಂತೆಯೇ ಇಂದು ನಾನು ಬಿಜೆಪಿ ತೊರೆಯುತ್ತಿರುವುದಕ್ಕೆ ಅಲ್ಲಿನ ಸರ್ವಾಧಿಕಾರಿ ಧೋರಣೆಯೇ ಕಾರಣ. ಇದೇ ಕಾರಣಕ್ಕಾಗಿ ನಾನು ಇಂದು ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದು, ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಟನಾ ಸಾಹಿಬ್ ಕ್ಷೇತ್ರದಿಂದಲೇ ಶತ್ರುಘ್ನ ಸಿನ್ಹಾ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಬಿಹಾರ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಸಾದ್ ಸಿಂಗ್ ಘೋಷಿಸಿದ್ದಾರೆ. ಎರಡು ವರ್ಷಗಳಿಂದ ಬಿಜೆಪಿ ಹಾಗೂ ಮೋದಿ ಅವರನ್ನು ಕಟುವಾಗಿ ಟೀಕಿಸುತ್ತಿದ್ದ ಶತ್ರುಘ್ನ ಸಿನ್ಹಾ ಅವರಿಗೆ ಈ ಸಲ ಟಿಕೆಟ್ ನೀಡಿಲ್ಲ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…