ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಇನ್ನು ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ಏಪ್ರಿಲ್ 6 ರಿಂದ ನಾಲ್ಕು ದಿನ ಸಾಧಾರಣ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.
ಹಗುರ ಮಳೆ ಎಲ್ಲೆಲ್ಲಿ?
ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
ಏಪ್ರಿಲ್ 9ಕ್ಕೆ ಹಲವೆಡೆ ಮಳೆ
ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ಹಾವೇರಿ, ರಾಯಚೂರು, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…