Featured

ಏಪ್ರಿಲ್ 6 ರಿಂದ ಕರ್ನಾಟಕದಲ್ಲಿ ಮಳೆ : ಹವಾಮಾನ ಇಲಾಖೆ ವರದಿ – Vishwanews24

ಏಪ್ರಿಲ್ 6 ರಿಂದ ಕರ್ನಾಟಕದಲ್ಲಿ ಮಳೆ ; ಹವಾಮಾನ ಇಲಾಖೆ ವರದಿ

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ  ಜನತೆಗೆ ಸಿಹಿ ಸುದ್ದಿ. ಇನ್ನು ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.

ಇದೇ ಏಪ್ರಿಲ್ 6 ರಿಂದ ನಾಲ್ಕು ದಿನ ಸಾಧಾರಣ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್‌ 7 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.

ಹಗುರ ಮಳೆ ಎಲ್ಲೆಲ್ಲಿ?
ಏಪ್ರಿಲ್‌ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಏಪ್ರಿಲ್‌ 9ಕ್ಕೆ ಹಲವೆಡೆ ಮಳೆ
ಏಪ್ರಿಲ್‌ 9 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ಹಾವೇರಿ, ರಾಯಚೂರು, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago