Featured

ಏಮ್ಸ್‌ ಆಸ್ಪತ್ರೆಯಲ್ಲಿರುವಂತಹ ವ್ಯವಸ್ಥೆಯನ್ನು ನಮ್ಮ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲೂ ಜಾರಿಗೊಳಿಸಲಾಗುವುದು : ಶ್ರೀರಾಮುಲು -Vishwanews24

ಬೆಂಗಳೂರು :ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿರುವಂತಹ ವ್ಯವಸ್ಥೆಯನ್ನು ನಮ್ಮ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲೂ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿಯ ಏಮ್ಸ್‌ ಮಾದರಿಯಲ್ಲಿ ಒಂದು ಬಾರಿ ರಕ್ತ ಪಡೆದರೆ 16ಕ್ಕೂ ಹೆಚ್ಚು ಟೆಸ್ಟ್‌ (ಪರೀಕ್ಷೆ )ಗಳ ವರದಿ ನೀಡುವಂತಹ ಪ್ರಯೋಗಾಲಯ ವ್ಯವಸ್ಥೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲೂ ಜಾರಿಗೊಳಿಸ ಲಾಗುವುದು. ಈ ಕುರಿತು ತಜ್ಞ ವೈದ್ಯರ ತಂಡದ ಜೊತೆ ಚರ್ಚಿಸಲಾಗುತ್ತದೆ. ಜನೌಷಧ ಕೇಂದ್ರಗಳನ್ನು ಹಲವೆಡೆ ಸ್ಥಾಪನೆ ಮಾಡಿಲ್ಲ. ಜನತೆಗೆ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಜನೌಷಧ ಕೇಂದ್ರಗಳನ್ನು ರಾಜ್ಯದಲ್ಲೆಡೆ ಆರಂಭಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಗಿಗಳ ಸಂಬಂಧಿಕರು ಮಲಗುವುದನ್ನು ಕಂಡಿದ್ದೇನೆ, ರೋಗಿಗಳ ಸಂಬಂಧಿಕರಿಗೆ ತಂಗಲು ಜಿಲ್ಲಾಸ್ಪತ್ರೆಗಳಲ್ಲಿ ಶೆಲ್ಟರ್ ಗಳ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ. ಜೊತೆಗೆ ಮೂಲ ಸೌಕರ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾತ್ರಿ ಊಟದ ವ್ಯವಸ್ಥೆ ಇವುಗಳನ್ನು ಸಿಎಸ್ ಆರ್ ನಿಧಿಯಿಂದ ಮಾಡಬೇಕೇ..? ಅಥವಾ ಎನ್ ಎಚ್ ಆರ್ ಎಂ ಎನ್ ಜಿಓಗೆ ನೀಡಬೇಕೇ ಎಂಬುದರ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 1,500 ವೈದ್ಯರ ಹುದ್ದೆ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

19 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

20 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

22 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

22 hours ago