Featured

ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ  : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ  : ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು: ಈ ವರ್ಷದ ಬೇಸಿಗೆಯಲ್ಲಿ ಎಪ್ರಿಲ್‌ನಿಂದ ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬಿಸಿಗಾಳಿ: ರಾಜ್ಯದ ಹಲವೆಡೆ ಎ.2 ರಿಂದ 14 ದಿನಗಳ ಕಾಲ ಬಿಸಿಗಾಳಿ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಾದ ಚಿತ್ರದುರ್ಗ ಗದಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆ ಗಳಲ್ಲಿ ಬಿಸಿಗಾಳಿ ಕಾಣಿಸಿಕೊಳ್ಳಲಿದೆ.

ಬಿಸಿಗಾಳಿ ಸಂದರ್ಭಗಳಲ್ಲಿ ಅತ್ಯಧಿಕ ತಾಪಮಾನವು ವೃದ್ಧರು, ಮಕ್ಕಳು ಹಾಗೂ ಆನಾರೋಗ್ಯಪೀಡಿತರ ಮೇಲೆ ಪರಿಣಾಮ ಬೀರಲಿದ್ದು, ಮುಖ್ಯವಾಗಿ ಶಾಖದೊತ್ತಡ, ನಿರ್ಜಲೀಕರಣ ಆಯಾಸ ಕಂಡು ಬರಲಿದೆ. ಮೂಲ ಸೌಕರ್ಯಗಳಾದ ವಿದ್ಯುತ್ ಸರಬರಾಜು ಮತ್ತು ಸಾರಿಗೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ.

ಈ ಸವಾಲುಗಳನ್ನು ಎದುರಿಸಲು ಅಧಿಕಾರಿಗಳು ಪೂರ್ವಭಾವಿ ಕ್ರಮ ಕೈಗೊಳ್ಳುವುದು ಅಗತ್ಯ. ಬಿಸಿಗಾಳಿ ಪರಿಣಾಮಗಳನ್ನು ನಿವಾರಿಸಲು ಕಾರ್ಯತಂತ್ರಗಳನ್ನು ರೂಪಿಸಬೇಕಾಗಿದೆ. ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಮತ್ತು ಬಿಸಿಗಾಳಿಯ ಪ್ರತಿಕೂಲ ಪರಿಣಾಮಗಳನ್ನು ಕಡಿಮೆ ಮಾಡಲು ಇಂತಹ ಪ್ರಯತ್ನ ಅತ್ಯಗತ್ಯ ಎಂದು ಇಲಾಖೆ ಸಲಹೆ ನೀಡಿದೆ.

ಗರಿಷ್ಠ ತಾಪಮಾನ : 2024ರ ಎಪ್ರಿಲ್ ತಿಂಗಳಲ್ಲಿ ಗರಿಷ್ಠ ತಾಪಮಾನ ರಾಜ್ಯದ ಹಲವೆಡೆ ವಾಡಿಕೆಗಿಂತ ಅಧಿಕವಾಗಿರುವ ಮತ್ತು ಕನಿಷ್ಠ ತಾಪಮಾನವು ಅಧಿಕವಾಗುವ ಸಾಧ್ಯತೆ ಇದೆ.

ಬಿಸಿಗಾಳಿ: ರಾಜ್ಯದ ಹಲವೆಡೆ ಎಪ್ರಿಲ್ 2 ರಿಂದ 5 ದಿನಗಳು ಬಿಸಿಗಾಳಿ ಕಾಣಬರುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆ ಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆ ಗಳಾದ ಚಿತ್ರದುರ್ಗ , ಗದಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಫುರ , ಕೋಲಾರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆ ಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಇಲಾಖೆ ಸೂಚನೆ ನೀಡಿದೆ.

ಮಳೆ ಮುನ್ಸೂಚನೆ : ರಾಜ್ಯದ ಉತ್ತರ ಒಳನಾಡಿನ ಜಿಲ್ಲೆ ಗಳಲ್ಲಿ ವಾಡಿಕೆಗಿಂತಾ ಅಧಿಕ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆ ಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

21 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago