Featured

ಏರ್​ ಇಂಡಿಯಾ ವಿಮಾನಗಳಲ್ಲಿ ಇನ್ನು ಮುಂದೆ ಜೈ ಹಿಂದ್​ ಘೋಷಣೆ – Vishwanews24

ನವದೆಹಲಿ: ಏರ್​ ಇಂಡಿಯಾ ವಿಮಾನಗಳಲ್ಲಿ ಇನ್ನುಮುಂದೆ ಜೈಹಿಂದ್​ ಎಂಬ ಘೋಷಣೆ ಕೇಳಿಬರಲಿದೆ. ವಿಮಾನ ಸಿಬ್ಬಂದಿ ತಕ್ಷಣವೇ ಜಾರಿಗೆ ಬರುವಂತೆ ಈ ಆದೇಶ ಪಾಲನೆ ಮಾಡಬೇಕು ಎಂದು ಏರ್ ಇಂಡಿಯಾ ಕಾರ್ಯಕಾರಿ ನಿರ್ದೇಶದ ಅಮಿತಾಬ್​ ಸಿಂಗ್​ ಸೂಚಿಸಿದ್ದಾರೆ.

ಜೈ ಹಿಂದ್​ ಘೋಷಣೆಯಿಂದ ಪ್ರಯಾಣಿಕರಲ್ಲಿ ಉತ್ಸಾಹವೂ ಹೆಚ್ಚುತ್ತದೆ. ಅಲ್ಲದೆ ಸದ್ಯದ ರಾಷ್ಟ್ರದ ಜನರ ಮನಸ್ಥಿತಿ ದೇಶಕ್ಕಾಗಿ ತುಡಿಯುತ್ತಿದೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಏರ್​ ಇಂಡಿಯಾ ತಿಳಿಸಿದೆ.

ಏರ್ ಇಂಡಿಯಾದ ಮಾಜಿ ಮುಖ್ಯಸ್ಥ ಅಶ್ವನಿ ಲೋಹಾನಿ 2016ರಲ್ಲಿ ಇದೇ ರೀತಿ ಆದೇಶ ಹೊರಡಿಸಿದ್ದರು. ವಿಮಾನ ವಿಳಂಬದ ಸಮಯದಲ್ಲಿ ಸಿಬ್ಬಂದಿ ಅನಾದರಣೀಯವಾಗಿ, ಕಾಳಜಿಯಿಲ್ಲದ ರೀತಿ ವರ್ತಿಸುತ್ತಾರೆ ಎಂದು 2016ರಲ್ಲಿ ಗ್ರಾಹಕರಿಂದ ದೂರು ಬರತೊಡಗಿತ್ತು. ಆಗ ಅಶ್ವನಿ ಈ ನಿರ್ಧಾರ ತೆಗೆದುಕೊಂಡಿದ್ದರು.

ವಿಮಾನ ಟೇಕ್ಆಫ್​ ಆಗುವ ವೇಳೆ ಫ್ಲೈಟ್​ ಕಮಾಂಡರ್​ ಜೈ ಹಿಂದ್​ ಎಂದು ಘೋಷಣೆ ಕೂಗಬೇಕು ಎಂದು ಹೇಳಿದ್ದರು. ಇದು ಅದ್ಭುತ ಪ್ರಭಾವ ಬೀರಿತ್ತು. ಪ್ರಯಾಣಿಕರು ಮತ್ತು ಏರ್​ಲೈನ್​ ಸಿಬ್ಬಂದಿ ಮಧ್ಯ ಉತ್ತಮ ಸೌಹಾರ್ದ ಮೂಡಿಸುವಲ್ಲಿ ಇದು ಸಹಕಾರಿಯಾಗಿತ್ತು.

ವಿಮಾನದ ಕ್ಯಾಪ್ಟನ್, ಸೇವಾ ಸಿಬ್ಬಂದಿಗಳು ಪ್ರಯಾಣಿಕರ ಜೊತೆ ಸದಾ ಪರಸ್ಪರ ಸಂಪರ್ಕ ಹೊಂದಿರಲೇಬೇಕಾಗಿರುತ್ತದೆ. ಪ್ರತಿ ಸೂಚನೆಯ ನಂತರ ಜೈ ಹಿಂದ್ ಹೇಳುವುದರಿಂದ ಉತ್ತಮ ವಾತಾವರಣ ವಿಮಾನದಲ್ಲಿ ಉಂಟಾಗುತ್ತದೆ. ಪ್ರಯಾಣಿಕರ, ವಿಮಾನ ಸಿಬ್ಬಂದಿಯ ನಡುವೆ ಬಂಧ ಏರ್ಪಡುತ್ತದೆ ಎಂದು ಏರ್‌ ಇಂಡಿಯಾ ಹೇಳಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

2 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

2 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

2 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

2 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

3 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

3 hours ago