ನವದೆಹಲಿ: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸುಮಾರು 300 ಮಂದಿ ಹಿರಿಯ ಪೈಲಟ್ ಗಳು ಸಾಮೂಹಿಕವಾಗಿ ರಜೆ ತೆಗೆದುಕೊಂಡಿದ್ದಾರೆ. ಜೊತೆಗೆ ತಮ್ಮ ಮೊಬೈಲ್ ಫೋನ್ ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಸುಮಾರು 79 ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಟಾಟಾ ಗ್ರೂಪ್ ಒಡೆತನದ ನೂತನ ಉದ್ಯೋಗ ನೀತಿಯನ್ನು ವಿರೋಧಿಸಿ ಪೈಲಟ್ ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಪೈಲಟ್ ಗಳನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಪೈಲೆಟ್ ಗಳ ಪ್ರತಿಭಟನೆಯಿಂದ ಮಂಗಳೂರು ಏರ್ಪೋರ್ಟ್ ನಲ್ಲಿ ವಿಮಾನ ಹಾರಾಟದಲ್ಲಿ ಇಂದು ಯಾವುದೇ ವ್ಯತ್ಯಯ ಕಂಡುಬಂದಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…