Featured

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ

ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ (ಟರ್ಬುಲೆನ್ಸ್) ಒಳಗಾಗಿದ್ದ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ಡ್ರಗ್ಸ್ ಸೇವಿಸಿ ವಿಮಾನ ಹಾರಿಸುತ್ತಿದ್ದರು ಎಂಬ ವಿಚಾರ ಹೊರ ಬಿದ್ದ ಬೆನ್ನಲ್ಲೇ ಇದೀಗ ಏರ್ ಇಂಡಿಯಾ ತನ್ನ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಸೇವನೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.

ಪ್ರಯಾಣಿಕರ ಭದ್ರತೆ ಮತ್ತು ವೈಮಾನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಏರ್ ಇಂಡಿಯಾ ಆಡಳಿತ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಎರಡೂ ಸಂಸ್ಥೆಗಳು ತಮ್ಮ ಪೈಲಟ್‌ಗಳಿಗೆ ಆಂತರಿಕ ಸಂದೇಶ ರವಾನಿಸಿದ್ದು, ವಿಮಾನಯಾನ ರಂಗದ ಪ್ರಸ್ತುತ ನಿಯಮಾವಳಿಗಳ ಅಡಿಯಲ್ಲಿ ಅನುಮತಿಸದ ಯಾವುದೇ ಮಾದಕ ವಸ್ತುಗಳು ಅಥವಾ ಔಷಧಗಳ ಸೇವನೆಗೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿವೆ. ಈ ಪರೀಕ್ಷೆಗಳು ಕಡ್ಡಾಯವಾಗಿದ್ದು, ಆಗಸ್ಟ್ 13ರಿಂದ ಆರಂಭವಾಗಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿಮಾನಯಾನ ಸಚಿವಾಲಯದ ನಿಯಮಗಳ ಪ್ರಕಾರ, ವಿಮಾನಯಾನ ಸಂಸ್ಥೆಗಳು ಪ್ರತಿ ವರ್ಷ ತಮ್ಮ ಒಟ್ಟು ವಿಮಾನ ಸಿಬ್ಬಂದಿಯಲ್ಲಿ ಕನಿಷ್ಠ ಶೇ. 10ರಷ್ಟು ಸಿಬ್ಬಂದಿಗೆ ಸೈಕೋಆಕ್ಟಿವ್ ಮಾದಕದ್ರವ್ಯ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ. ವಿಮಾನಯಾನ ಕ್ಷೇತ್ರದ ಸುರಕ್ಷತಾ ಮಾನದಂಡಗಳನ್ನು ಎತ್ತಿಹಿಡಿಯಲು ಈ ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರು ಮತ್ತು ಇತರ ಪಾಲುದಾರರಲ್ಲಿ ವಿಶ್ವಾಸ ಮೂಡಿಸಲು ಈ ನಿರ್ಧಾರ ಅಗತ್ಯವಾಗಿತ್ತು ಎಂದು ಏರ್ ಇಂಡಿಯಾ ಹೇಳಿದೆ.

ಆಗಸ್ಟ್ 4ರಂದು ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾದ A320neo ವಿಮಾನ ಹಾರಾಟದ ಮಧ್ಯದಲ್ಲಿಯೇ ಇದ್ದಕ್ಕಿದ್ದಂತೆ ಸುಮಾರು 300 ಅಡಿ ಎತ್ತರದಿಂದ ಕೆಳಕ್ಕೆ ಕುಸಿದಿತ್ತು. ಈ ವಿಮಾನದ ಕ್ಯಾಪ್ಟನ್ ಗಾಂಜಾ ಸೇವಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಹೀಗಾಗಿ, ಏರ್ ಇಂಡಿಯಾ ಸಂಸ್ಥೆ ಈ ನಿರ್ಧಾರ ತೆಗೆದುಕೊಂಡಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

16 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago