ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಶಿವಮೊಗ್ಗ ಸಜ್ಜಾಗಿದೆ.
ಹೆಲಿಕಾಪ್ಟರ್ ಮೂಲಕ ಸಿಎಂ ಬೊಮ್ಮಾಯಿ ಈಗಾಗಲೇ ಶಿವಮೊಗ್ಗ ಬಂದಿಳಿದಿದ್ದು, ಅಲ್ಲಿನ ಸಿದ್ದತೆ ವೀಕ್ಷಿಸಿದ್ದಾರೆ.ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ದತೆ ನಡೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ.
ಯಡಿಯೂರಪ್ಪ ಹುಟ್ಟು ಹಬ್ಬದ ದಿನವೇ ಏರ್ ಪೋರ್ಟ್ ಉದ್ಘಾಟನೆಯಾಗುತ್ತಿರುವುದು ದೈವ ಇಚ್ಚೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿಎಸ್ವೈ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಮಲೆನಾಡಿನ ಆರ್ಥಿಕ ಹಾಗೂ ಪ್ರವಾಸೋದ್ಯಮಕ್ಕೆ ಸಹಾಯಕವಾಗಲಿದೆ. ಇದು ಅತ್ಯಂತ ವಿಶೇಷ ಹಾಗೂ ದೈವ ಇಚ್ಚೆಯಾಗಿದ್ದು, ಬಹಳ ವಿಶೇಷವಾಗಿದೆ. ಶಿವಮೊಗ್ಗಏರ್ ಪೋರ್ಟ್ ಉದ್ಘಾಟನೆ ಒಂದು ಮೈಲಿಗಲ್ಲು ಎಂದಿದ್ದಾರೆ.
ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮರೆಯಲಾಗದ ಕ್ಷಣ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ , ಇಡೀ ರಾಜ್ಯಾದ್ಯಂತ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ, ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮರೆಯಲಾಗದ ಕ್ಷಣ. ಮೋದಿ ಏರ್ಪೋರ್ಟ್ ಉದ್ಘಾಟನೆ ಮಾಡುತ್ತಿರುವುದು ನಮ್ಮ ಸೌಭಾಗ್ಯ ಎಂದು ವಿಜಯೇಂದ್ರ ಹೇಳಿದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…