Featured

ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ  ಮೊದಲ ಸ್ಥಾನ ಪಡೆದಿದ ಬಾಲಿವುಡ್ ನಟ ಸೋನು ಸೂದ್  -Vishwanews24

ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ  ಮೊದಲ ಸ್ಥಾನ ಪಡೆದಿದ ಬಾಲಿವುಡ್ ನಟ ಸೋನು ಸೂದ್  -Vishwanews24

ಮುಂಬೈ: ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿ ರಿಲೀಸ್ ಆಗಿದ್ದು, ಬಾಲಿವುಡ್ ನಟ ಸೋನು ಸೂದ್ ಮೊದಲ ಸ್ಥಾನ ಪಡೆದಿದ್ದಾರೆ.

ಬ್ರಿಟನ್ ನ ‘ಈಸ್ಟರ್ನ್ ಐ’ ನಿಯತಕಾಲಿಕೆ ಪ್ರಕಟಿಸಿರುವ ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಸೆಲೆಬ್ರಿಟಿಗಳು ಸ್ಥಾನ ಪಡೆದಿದ್ದಾರೆ. ಸೋನು ಸೂದ್ ಮೊದಲ ಸ್ಥಾನದಲ್ಲಿದ್ದರೆ, ಭಾರತೀಯ ಮೂಲದ ಲಿಲ್ಲಿ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.

ಸಿನಿಮಾ ಮಾತ್ರವಲ್ಲ, ಲಾಕ್‍ಡೌನ್ ಬಳೀಕದ ಮಾನವೀಯ ಕಾರ್ಯಕ್ರಗಳಿಂದ ಜನರ ಮೆಚ್ಚುಗೆಗೆ ಪಾತ್ರರಾಗಿರುವ ಸೋನ್ ಸೂದ್ ಇದೀಗ ಏಷ್ಯಾದ ನಂಬರ್ 1 ಸೆಲೆಬ್ರಿಟಿ ಆಗಿದ್ದಾರೆ. ಈ ಕುರಿತು ಈಸ್ಟರ್ನ್ ಐ ನ ಸಂಪಾದಕ ಅಜರ್ ನಜೀರ್, ಏಷ್ಯಾದ ನಂಬರ್ 1 ಸೆಲೆಬ್ರಿಟಿ ಸ್ಥಾನಕ್ಕೆ ಸೋನು ಸೂದ್ ಅರ್ಹ ವ್ಯಕ್ತಿ. ಕೊರೊನಾ ಸಮಯದಲ್ಲಿ ಅವರು ಮಾಡಿದ್ದಷ್ಟು ಸಹಾಯ ಬೇರೆ ಯಾವ ಸೆಲೆಬ್ರಿಟಿ ಕೂಡ ಮಾಡಿಲ್ಲ ಎಂದು ಬಣ್ಣಿಸಿದ್ದಾರೆ.

ಸೂನ್ ಸೂದ್ ಅವರು ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಕಾರ್ಮಿಕರನ್ನು ಊರಿಗೆ ಕಳುಹಿಸುವುದು, ಬಡವರಿಗೆ ಹಣಕಾಸು, ವಿದ್ಯಾರ್ಥಿಗಳಿಗೆ ಸಹಾಯ, ಶಸ್ತ್ರಚಿಕಿತ್ಸೆಗಳಿಗೆ ಹಣಕಾಸು, ರೈತರಿಗೆ ಸಹಾಯ, ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಹೀಗೆ ಹಲವಾರು ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬ್ರಿಟನ್‍ನ ‘ಜಿನ್ ಹೆರ್ಶೋಲ್ಟ್ ಹ್ಯುಮೆನಿಟೇರಿಯನ್’ ಪ್ರಶಸ್ತಿ ನೀಡಬೇಕು ಎಂದು ಹೇಳಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಯೂಟ್ಯೂಬರ್ ಲಿಲ್ಲಿ ಸಿಂಗ್ ಭಾರೀ ಜನಪ್ರಿಯರಾಗಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಹಲವು ದೇಶಗಳಲ್ಲಿ ತಮ್ಮದೇ ಆದ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

56 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

1 hour ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

1 hour ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

2 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago