ಕಪಾಲಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾವು ಅವಕಾಶ ಕೊಡುವುದಿಲ್ಲ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಬೆಂಗಳೂರು : ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ನೂರಾರು ಕಾರ್ಯಕರ್ತರು ಕನಕಪುರ ಅಯ್ಯಪ್ಪಸ್ವಾಮಿ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ಪ್ರತಿಭಟನೆ ನಡೆಸಿದರು.

ರಾಮನಗರದ ಜಿಲ್ಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಅತೀ ಎತ್ತರದ ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಸೋಮವಾರ ಹಿಂದೂ ಜಾಗರಣ ವೇದಿಕೆ ಕನಕಪುರ ಚಲೋ ಮೂಲಕ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದ ಪ್ರಭಾಕರ್ ಭಟ್, “ನಾವು ಶಾಂತಿ ಕದಡಲು ಬಂದಿಲ್ಲ. ನಾವು ಬಲಿದಾನಕ್ಕೂ ಸಿದ್ದರಿದ್ದೇವೆ. ಸಂಸ್ಕೃತಿಗೆ ಕಲ್ಲು ಹಾಕಲು ಹೊರಟವರಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಹೊರಟಿದ್ದೀರಿ. ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡುವ ಬದಲು ಪೇಜಾವರಶ್ರೀಗಳ ಪ್ರತಿಮೆ ನಿರ್ಮಾಣ ಮಾಡಿ. ದೇಶದಲ್ಲಿರುವ ಹಿಂದೂಗಳ ಜಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೇವೆ” ಎಂದು ಹೇಳಿದರು.

“ಡಿ.ಕೆ ಶಿವಕುಮಾರ್‌ ಅವರೇ ನಾನು ಯಾರೆಂದು ನಿಮಗೆ ಗೊತ್ತಿಲ್ಲವೇ. ನಾನು ಶ್ರೀರಾಮುಲು ಮಗಳ ಮದುವೆಯಲ್ಲಿ ನಿಮ್ಮನ್ನು ಭೇಟಿಯಾಗಿದ್ದೆ. ಸುಳ್ಳು, ಮೋಸ ವಂಚನೆಯಿಂದ ಎಷ್ಟು ದಿನ ಇರುತ್ತೀರಾ. ವೋಟ್ ಬ್ಯಾಂಕ್‌ಗಾಗಿ ಏಸು ಪ್ರತಿಮೆ ನಿರ್ಮಾಣಕ್ಕೆ ಹೊರಟಿದ್ದೀರಾ. ಅಮೆರಿಕ, ಇಂಗ್ಲೆಂಡ್‌ನಲ್ಲಿ ಬೇಕಾದರೆ ಪ್ರತಿಮೆ ನಿರ್ಮಾಣ ಮಾಡಿ. ಆದರೆ ಇಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾವು ಅವಕಾಶ ಕೊಡುವುದಿಲ್ಲ” ಎಂದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago