ಬೆಂಗಳೂರು : ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ನೂರಾರು ಕಾರ್ಯಕರ್ತರು ಕನಕಪುರ ಅಯ್ಯಪ್ಪಸ್ವಾಮಿ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ಪ್ರತಿಭಟನೆ ನಡೆಸಿದರು.
ರಾಮನಗರದ ಜಿಲ್ಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಅತೀ ಎತ್ತರದ ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಸೋಮವಾರ ಹಿಂದೂ ಜಾಗರಣ ವೇದಿಕೆ ಕನಕಪುರ ಚಲೋ ಮೂಲಕ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದ ಪ್ರಭಾಕರ್ ಭಟ್, “ನಾವು ಶಾಂತಿ ಕದಡಲು ಬಂದಿಲ್ಲ. ನಾವು ಬಲಿದಾನಕ್ಕೂ ಸಿದ್ದರಿದ್ದೇವೆ. ಸಂಸ್ಕೃತಿಗೆ ಕಲ್ಲು ಹಾಕಲು ಹೊರಟವರಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಹೊರಟಿದ್ದೀರಿ. ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡುವ ಬದಲು ಪೇಜಾವರಶ್ರೀಗಳ ಪ್ರತಿಮೆ ನಿರ್ಮಾಣ ಮಾಡಿ. ದೇಶದಲ್ಲಿರುವ ಹಿಂದೂಗಳ ಜಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೇವೆ” ಎಂದು ಹೇಳಿದರು.
“ಡಿ.ಕೆ ಶಿವಕುಮಾರ್ ಅವರೇ ನಾನು ಯಾರೆಂದು ನಿಮಗೆ ಗೊತ್ತಿಲ್ಲವೇ. ನಾನು ಶ್ರೀರಾಮುಲು ಮಗಳ ಮದುವೆಯಲ್ಲಿ ನಿಮ್ಮನ್ನು ಭೇಟಿಯಾಗಿದ್ದೆ. ಸುಳ್ಳು, ಮೋಸ ವಂಚನೆಯಿಂದ ಎಷ್ಟು ದಿನ ಇರುತ್ತೀರಾ. ವೋಟ್ ಬ್ಯಾಂಕ್‌ಗಾಗಿ ಏಸು ಪ್ರತಿಮೆ ನಿರ್ಮಾಣಕ್ಕೆ ಹೊರಟಿದ್ದೀರಾ. ಅಮೆರಿಕ, ಇಂಗ್ಲೆಂಡ್‌ನಲ್ಲಿ ಬೇಕಾದರೆ ಪ್ರತಿಮೆ ನಿರ್ಮಾಣ ಮಾಡಿ. ಆದರೆ ಇಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾವು ಅವಕಾಶ ಕೊಡುವುದಿಲ್ಲ” ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…