ಏ.1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಿ ಸರ್ಕಾರ ಆದೇಶ- Vishwanews24

Featured, ರಾಜ್ಯ ನ್ಯೂಸ್

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್.1 ರಿಂದ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

 

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.

ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ ಮೂಲ ವೇತನ ಎಂದರು ಸ್ರಕಾರಿ ನೌಕರರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಎಂದು ತಿಳಿಸಿದ್ದಾರೆ.

ಬಂಟ್ವಾಳ: ಹಣದಾಸೆಗೆ ಮನೆಯಲ್ಲೇ ಅಕ್ರಮ ಸ್ವಿಮ್ಮಿಂಗ್ ಫೂಲ್‌ ನಿರ್ಮಿಸಿ ಬಾಡಿಗೆ ನೀಡುತ್ತಿರುವ ಇಸ್ರೇಲ್ ಉದ್ಯಮಿ – Vishwanews24

 

Leave a Reply