ನವದೆಹಲಿ: ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಹಿಂದೆ 45 ವರ್ಷ ಮೇಲ್ಪಟ್ಟ 2ಕ್ಕೂ ಹೆಚ್ಚು ಖಾಯಿಲೆಗಳಿರುವವರಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ಆದರೆ ಇದೀಗ ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೋವಿನ್ ಆ್ಯಪ್‍ನಲ್ಲಿ ರಿಜಿಸ್ಟರ್ ಮಾಡಿಕೊಂಡು ಏಪ್ರಿಲ್ 1ರಿಂದ ಲಸಿಕೆ ಪಡೆಯಬಹುದಾಗಿದೆ.
ಕೊರೊನಾ ವೈರಸ್ ಟಾಸ್ಕ್‍ಫೋಸ್ಟ್ ಹಾಗೂ ತಜ್ಞರ ಸಲಹೆ ಮೇರೆಗೆ ಕ್ಯಾಬಿಟ್‍ನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಲಸಿಕೆ ಕೊರತೆ ಇಲ್ಲ. ಸಾಕಷ್ಟು ಲಸಿಕೆ ಲಭ್ಯವಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ವಿಜ್ಞಾನಿಗಳ ಹಾಗೂ ವಿಶ್ವ ಮಟ್ಟದ ವಿಜ್ಞಾನ ಸಂಸ್ಥೆಗಳ ಸಲಹೆ ಮೇರೆಗೆ 2ನೇ ಡೋಸ್ ವ್ಯಾಕ್ಸಿನ್‍ನ್ನು 4 ಹಾಗೂ 8ನೇ ವಾರದಲ್ಲಿ ನೀಡಲು ನಿರ್ಧರಿಸಲಾಗಿದೆ. ವಿಶೇಷವಾಗಿ ಕೋವಿಶೀಲ್ಡ್‍ಗೆ ಈ ನಿಯಮ ಅನ್ವಯವಾಗಲಿದೆ. ಈ ವರೆಗೆ 4.72 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇನ್ನೂ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು, ಅರ್ಹರೆಲ್ಲರೂ ಆದಷ್ಟು ಬೇಗ ಹಾಕಿಸಿಕೊಳ್ಳಿ ಎಂದು ಜಾವಡೇಕರ್ ಮನವಿ ಮಾಡಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…