ಏ. 11 ರಂದು ಉಡುಪಿಗೆ ಮುಖ್ಯಮಂತ್ರಿ ಬೊಮ್ಮಾಯಿ – Vishwanews24

Featured, ಉಡುಪಿ, ರಾಜ್ಯ ನ್ಯೂಸ್

ಏ. 11 ರಂದು ಉಡುಪಿಗೆ ಮುಖ್ಯಮಂತ್ರಿ ಬೊಮ್ಮಾಯಿ 

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ  ಭೇಟಿ..

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್‌ 11 ರಂದು ಸೋಮವಾರ ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಅಂದು ಬೆಳಿಗ್ಗೆ 11.45ಕ್ಕೆ ಆದಿಉಡುಪಿ ಹೆಲಿಪ್ಯಾಡ್‌ ಗೆ ಆಗಮಿಸಲಿರುವ ಅವರು ರಸ್ತೆ ಮೂಲಕ ಮಧ್ಯಾಹ್ನ 12 ಗಂಟೆಗೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಆಗಮಿಸಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಮಧ್ಯಾಹ್ನ 3ಗಂಟೆಗೆ ಡಾ. ಬನ್ನಂಜೆ ಗೋವಿಂದ ಆಚಾರ್ಯ ಸ್ಮಾರಕ ಡಿಜಿಟಲ್‌ ಗ್ರಂಥಾಲಯ ಉದ್ಘಾಟಿಸಲಿದ್ದು, 3.30 ಕ್ಕೆ ಬನ್ನಂಜೆ ಕೆ ಎಸ್‌ ಆರ್‌ ಟಿ ಸಿ ಬಸ್‌ ನಿಲ್ದಾಣವನ್ನು ಉದ್ಘಾಟಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5.30 ಕ್ಕೆ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಚಂದ್ರು ಕೊಲೆ ಪ್ರಕರಣ :  ಬೈಕ್ ಗಲಾಟೆಯೇ ಕಾರಣ, ನನ್ನ ಹೇಳಿಕೆ ತಪ್ಪಾಗಿದೆ’ : ಗೃಹ ಸಚಿವರ ಸ್ಪಷ್ಟನೆ – Vishwanews24

Leave a Reply