ತುಮಕೂರು: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು.
ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೆ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.
23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಇದ್ದತಂಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…