ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ ಎಂದು ತಿಳಿದುಬಂದಿದೆ.
ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ ಎಂದು ಹೇಳಲಾಗಿದೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.
ನಿನ್ನೆ ಅಂದರೆ ಫೆ.18ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ.
ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…