ಏ.15 ರಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ಉಡುಪಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – Vishwanews24

Featured, ಉಡುಪಿ

ಏ.15 ರಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ಉಡುಪಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ

ಉಡುಪಿ: ಶ್ರೀರಾಮ ಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ಅವರು ಉಡುಪಿ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಅವರು ಆದೇಶ ಹೊರಡಿಸಿದ್ದಾರೆ.

ಏಪ್ರಿಲ್‌ 15 ರಂದು ಗಂಗೊಳ್ಳಿಯಲ್ಲಿ ಹಿಂದೂ ಜಾಗರಣಾ ವೇದಿಕೆ ಗಂಗೊಳ್ಳೀ ಇವರ ವತಿಯಿಂದ ಗಂಗೊಳ್ಳಿ ಗ್ರಾಮದ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಅಂಗವಾಗಿ ಸಂಜೆ 05:00 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪ್ರಮೋದ ಮುತಾಲಿಕ ಶ್ರೀ.ರಾಮ ಸೇನಾ ಮುಖ್ಯಸ್ಥರು ಕಾರ್ಯಕ್ರಮಲ್ಲಿ ಪಾಲ್ಗೋಂಡು ಪ್ರಚೋಧನಾಕಾರಿ ಭಾಷಣ ಮಾಡಿದ್ದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹರ್ದತೆಗೆ ಧಕ್ಕೆ ಆಗಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾದ್ಯತೆಗಳು ಹೆಚ್ಚಾಗಿರುವುದರಿಂದ, ಹಾಗೂ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಈ ಹಿಂದೆ 2014 ರಿಂದ ಕೋಮು ಪ್ರೇರಿತ ಘಟನೆ ನಡೆದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿರುತ್ತವೆ. ಆದ್ದರಿಂದ ಏಪ್ರಿಲ್‌ 15ರಂದು ಮುತಾಲಿಕ್‌ ಅವರಿಗೆ ಉಡುಪಿ ಜಿಲ್ಲೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

Leave a Reply