ಉಡುಪಿ: ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಉಡುಪಿ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಅವರು ಆದೇಶ ಹೊರಡಿಸಿದ್ದಾರೆ.
ಏಪ್ರಿಲ್ 15 ರಂದು ಗಂಗೊಳ್ಳಿಯಲ್ಲಿ ಹಿಂದೂ ಜಾಗರಣಾ ವೇದಿಕೆ ಗಂಗೊಳ್ಳೀ ಇವರ ವತಿಯಿಂದ ಗಂಗೊಳ್ಳಿ ಗ್ರಾಮದ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಅಂಗವಾಗಿ ಸಂಜೆ 05:00 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪ್ರಮೋದ ಮುತಾಲಿಕ ಶ್ರೀ.ರಾಮ ಸೇನಾ ಮುಖ್ಯಸ್ಥರು ಕಾರ್ಯಕ್ರಮಲ್ಲಿ ಪಾಲ್ಗೋಂಡು ಪ್ರಚೋಧನಾಕಾರಿ ಭಾಷಣ ಮಾಡಿದ್ದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹರ್ದತೆಗೆ ಧಕ್ಕೆ ಆಗಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾದ್ಯತೆಗಳು ಹೆಚ್ಚಾಗಿರುವುದರಿಂದ, ಹಾಗೂ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಈ ಹಿಂದೆ 2014 ರಿಂದ ಕೋಮು ಪ್ರೇರಿತ ಘಟನೆ ನಡೆದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿರುತ್ತವೆ. ಆದ್ದರಿಂದ ಏಪ್ರಿಲ್ 15ರಂದು ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…