ಏ.17ರಂದು ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ: ಡಿ. ಬಸವರಾಜ್ – vishwanews24

Featured, ರಾಜ್ಯ ನ್ಯೂಸ್

ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ  ಬೃಹತ್ ಪ್ರತಿಭಟನೆ: ಡಿ. ಬಸವರಾಜ್

ದಾವಣಗೆರೆ: ಬಿಜೆಪಿಯ ದರ ಏರಿಕೆ ನೀತಿ ಖಂಡಿಸಿ ಹಾಗೂ ಕೇಂದ್ರ ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಏ. 17ರಂದು ಬೆಂಗಳೂರು ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಫ್ರಿಡಂ ಪಾರ್ಕ್ ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ರಾಜ್ಯದ ಸಚಿವರು, ಸಂಸದರು, ಶಾಸಕರು, ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಲಿದ್ದು ಐತಿಹಾಸಿಕ ಪ್ರತಿಭಟನೆ ಇದಾಗಲಿದೆ ಎಂದು ಹೇಳಿದರು.
ಬಿಜೆಪಿಯಿಂದ ಉಚ್ಚಾಟಿತ ಬಸನಗೌಡ ಪಾಟೀಲ್, ಬಿಜೆಪಿಯ ಬಂಡವಾಳ ಹೊರ ಹಾಕುತ್ತಿದ್ದು ಅದನ್ನು ಮುಚ್ಚಿಹಾಕಲು ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ.

ಕಾಸರಗೋಡು : ದ್ವೇಷದಿಂದ ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಚಿಕಿತ್ಸೆ ಫಲಿಸದೆ ಯುವತಿ ಸಾವು – vishwanews24

ಬಿಜೆಪಿಗೆ ಪ್ರತಿಭಟನೆ ನಡೆಸುವ ನೈತಿಕತೆ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಮಾತನಾಡುವುದೆಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಎಂದು ಹೇಳಿದರು.

Leave a Reply